newsfirstkannada.com

BREAKING: ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಮೊದಲ ಗೆಲುವು

Share :

Published June 4, 2024 at 10:48am

Update June 4, 2024 at 12:00pm

    ಕರ್ನಾಟಕ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗೆ ಮೊದಲ ಗೆಲುವು

    ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ವಿಜಯೋತ್ಸವ

    ಕೋಲಾರದಲ್ಲೂ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಮುನ್ನಡೆ

ಜಿದ್ದಾಜಿದ್ದಿನ ಲೋಕಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಭರ್ಜರಿ ಜಯ ಸಾಧಿಸಿದ್ದು, ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೆಚ್‌.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಸುಮಾರು 2 ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಪಡೆದುಕೊಂಡ ಮತದ ವಿವರ ಹೀಗಿದೆ.

ಜೆಡಿಎಸ್ ಅಭ್ಯರ್ಥಿ ಹೆಚ್‌.ಡಿ ಕುಮಾರಸ್ವಾಮಿ – 5,30,453 ಮತಗಳು
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು- 3,30,412 ಮತಗಳು

ಕೋಲಾರದಲ್ಲೂ ಜೆಡಿಎಸ್‌ ಗೆಲ್ಲುತ್ತಾ? 
ಮಂಡ್ಯ ಗೆಲುವಿನ ಜೊತೆಗೆ ಕೋಲಾರದಲ್ಲೂ ಬಿಜೆಪಿ, ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಮುನ್ನಡೆಯಲ್ಲಿದ್ದಾರೆ. ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರಿಗೆ ತೀವ್ರ ಸ್ಪರ್ಧೆ ನೀಡಿದ್ದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಮುನ್ನಡೆಯಲ್ಲಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಅವರು 3,61,252 ಮತಗಳನ್ನು ಪಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್ ಅವರ ವಿರುದ್ಧ 55,578 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ಮೋದಿಗೆ ಬಿಗ್​ ಶಾಕ್​​.. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ; ಕಾಂಗ್ರೆಸ್​​-ಎಸ್​​ಪಿಗೆ ಭಾರೀ ಮುನ್ನಡೆ! 

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಅವರನ್ನು ಆಯ್ಕೆ ಮಾಡಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಹಾಗೂ ಹೆಚ್‌.ಡಿ ಕುಮಾರಸ್ವಾಮಿ ಅವರು ಗೆಲ್ಲುವ ಭರವಸೆಯಲ್ಲಿದ್ದಾರೆ. ಇನ್ನು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿ ಮಧ್ಯೆ ಭರ್ಜರಿ ಪೈಪೋಟಿ ನಡೆದಿದೆ. ಮೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಜೆಡಿಎಸ್‌ ನಾಯಕರು ಮೂರಕ್ಕೆ ಮೂರು ಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಮೊದಲ ಗೆಲುವು

https://newsfirstlive.com/wp-content/uploads/2024/04/MODI_HDD.jpg

Load More