/newsfirstlive-kannada/media/post_attachments/wp-content/uploads/2025/05/cm-siddu.jpg)
ಬೆಂಗಳೂರು: ಆಗಸ್ಟ್ 11 ರಿಂದ ಮುಂಗಾರು ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಚಿವ ಸಂಪುಟ ಸಭೆ ನಡೆಸಿತು. ಈ ಸಭೆಯಲ್ಲಿ ಆಗಸ್ಟ್ 11 ರಿಂದ ಎರಡು ವಾರಗಳ ಕಾಲ ಅಧಿವೇಶನ ನಡೆಸಲು ತೀರ್ಮಾನ ಕೈಗೊಂಡಿದೆ.
ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಟಿ ನಡೆಸಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.
ಇದನ್ನೂ ಓದಿ: 38 ವರ್ಷಗಳ ಬಳಿಕ ನನಸಾಗುತ್ತಿದೆ ಅಣ್ಣಾವ್ರ ಕನಸು.. ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ನಿರೀಕ್ಷೆ..
ಸರ್ಕಾರ ತೆಗೆದುಕೊಂಡ ನಿರ್ಧಾರಗಳು
- ಕರ್ನಾಟಕ ಲೋಕಾಯುಕ್ತದಲ್ಲಿ ಅಪರ ನಿಬಂಧಕರ ಹುದ್ದೆ ನೇಮಕಕ್ಕೆ ಅನುಮೋದನೆ
- ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನಿಗದಿಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಅದಕ್ಕೂ ಮೊದಲು ಸಮೀಕ್ಷೆ ನಡೆಸಲು ನಿರ್ಧಾರ ಮಾಡಿದೆ. ಬೆಳೆ ಸಮೀಕ್ಷೆ, ಮಾರುಕಟ್ಟೆ ದರ ಪರಿಶೀಲನೆ ನಂತ್ರ ಬೆಂಬಲ ಬೆಲೆ ನಿಗದಿ ಆಗಲಿದೆ.
- ಅಪ್ಸರಕೊಂಡ ವನ್ಯಜೀವಿ ಧಾಮ ಘೋಷಣೆ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ. ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶ ಸೇರಿದಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ‘ಮುಗಲಿ ಕಡಲ ವನ್ಯಜೀವಿಧಾಮ’ ಎಂದು ಘೋಷಣೆಗೆ ನಿರ್ಧಾರ
- ಅನುಭವ ಮಂಟಪ: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ ರೂ.742.00 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಮೊದಲು 612 ಕೋಟಿ ರೂಪಾಯಿ ಅಂದಾಜಿಸಲಾಗಿತ್ತು. ಇದೀಗ ಜಿಎಸ್ಟಿ ಹೆಚ್ಚಳದ ಕಾರಣದಿಂದ 742 ಕೋಟಿ ಅಂದಾಜು ವೆಚ್ಚಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.
- ಗಣಿಗಾರಿಕೆಯಲ್ಲಿ ನಡೆದ ಅಕ್ರಮಗಳ ತನಿಖೆಯ ಎಸ್ಐಟಿ ಅವಧಿ ವಿಸ್ತರಣೆ ವಿಚಾರ ಪ್ರಸ್ತಾಪ ಆಗಿದೆ. ಆದರೆ ಈ ವಿಚಾರವನ್ನು ಮುಂದೂಡಿದೆ.
- ಅಲ್ಪಸಂಖ್ಯಾತರಿಗೆ ವಸತಿ ಯೋಜನೆಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವರು, ಸಾಚಾರ್ ಕಮಿಟಿ ವರದಿಯನ್ನೂ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯ ಆಗಲಿದೆ.
- ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳು ಇವೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದರು.
ಇದನ್ನೂ ಓದಿ: ಥಗ್ ಲೈಫ್ ಚಿತ್ರಕ್ಕೆ ಅಡ್ಡಿಪಡಿಸಿದ್ರೆ ಕ್ರಮಕೈಗೊಳ್ಳಿ ಎಂದ ಸುಪ್ರೀಂ; ವಾದ-ಪ್ರತಿವಾದ ಹೇಗಿತ್ತು..?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ