Advertisment

Breaking: ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

author-image
Ganesh
Updated On
ಇವತ್ತಿನಿಂದ ಧರ್ಮಸ್ಥಳ ಕೇಸ್​ನ ಅಸಲಿ ರಹಸ್ಯ ಹುಡುಕಾಟ.. SITಗೆ ಹೆಚ್ಚುವರಿಯಾಗಿ 20 ಅಧಿಕಾರಿಗಳ ನೇಮಕ
Advertisment
  • ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ
  • ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆ
  • ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ನೇಮಕ

ಬೆಂಗಳೂರು:ಧರ್ಮಸ್ಥಳದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ  (Special Investigation Team) ವಹಿಸಿದೆ.

Advertisment

ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅತ್ಯಾ*ಚಾರ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.

ಇದನ್ನೂ ಓದಿ: ಬ್ರಹ್ಮಪುತ್ರ ನದಿಗೆ ಮತ್ತೊಂದು ಮೆಗಾ ಡ್ಯಾಮ್ ನಿರ್ಮಾಣಕ್ಕೆ ಚೀನಾ ಚಾಲನೆ.. ಡ್ರ್ಯಾಗನ್ ಡ್ಯಾಮ್ ಕಿರಿಕ್..!

ಸರ್ಕಾರದ ಆದೇಶದಲ್ಲಿ ಏನಿದೆ..?

ವಿಷಯ: ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ. 211(ಎ), ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವ ಬಗ್ಗೆ..

ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷರ ಪತ್ರದಲ್ಲಿ ಧರ್ಮಸ್ಥಳದ ಭಾಗದಲ್ಲಿ ನೂರಾರು ಶ*ವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ದಿನಾಂಕ: 12-07-2025ರಂದು ಕೆಲವು ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ.

ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹ*ತ್ಯೆ, ಅತ್ಯಾ*ಚಾರ, ಅಸ್ವಾಭಾವಿಕವಾದ ಸಾ*ವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾ*ವು/ಕೊಲೆ ಪ್ರಕರಣಗಳು ಮತ್ತು ಅತ್ಯಾ*ಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಕೋರಿರುತ್ತಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ ರವರ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಸರ್ಕಾರ ತಿಳಿಸಿದೆ.

Advertisment

ಎಸ್​ಐಟಿನಲ್ಲಿ ಇರೋರು ಯಾರು..?

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ.ಪ್ರವಣ ಮೋಹಂತಿ ಎಸ್ಐಟಿಗೆ ಮುಖ್ಯಸ್ಥರಾಗಿರುತ್ತಾರೆ. ಇನ್ನು ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರೀಕ್ಷಕ ಎಂ.ಎನ್​.ಅನುಚೇತ್, ಸಿಎಆರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತೆ ಸೌಮ್ಯಲತ, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ್ ಎಸ್​ಐಟಿ ತಂಡದ ಸದಸ್ಯರಾಗಿರುತ್ತಾರೆ.

ಇದನ್ನೂ ಓದಿ: ಅಬ್ಬಾ.. ವರ್ಷ ಡಿಗ್ರಜೆ ಪರ್ಫಾರ್ಮೆನ್ಸ್​ಗೆ ಜಡ್ಜ್ ಸಖತ್​ ಥ್ರಿಲ್..​ ಮೈ ಜುಮ್ ಎನ್ನುವ ವಿಡಿಯೋ ಇಲ್ಲಿದೆ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment