newsfirstkannada.com

×

BIG BREAKING: ನಾಳೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ; ಕರ್ನಾಟಕದಲ್ಲಿ 2 ಹಂತದ ಮತದಾನ?

Share :

Published March 15, 2024 at 12:33pm

Update March 15, 2024 at 1:00pm

    ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ

    ಕೇಂದ್ರ ಚುನಾವಣಾ ಆಯುಕ್ತರಿಂದ ಮಹತ್ವದ ಸುದ್ದಿಗೋಷ್ಠಿ

    ಬಹು ನಿರೀಕ್ಷಿತ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿ

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಲಿದೆ.

ದೆಹಲಿಯ ವಿಜ್ಞಾನ್ ಭವನದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ.

ಇಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಮುಖ್ಯಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜೊತೆ ಮಹತ್ವದ ಸಭೆ ನಡೆಸಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸುದ್ದಿಗೋಷ್ಟಿ ನಿಗದಿ ಮಾಡಲಾಗಿದೆ. ಚುನಾವಣೆ ದಿನಾಂಕ ಘೋಷಣೆಯ ಜೊತೆಗೆ ನಾಳೆ ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

2019ರ ಚುನಾವಣಾ ವಿವರ
ಕಳೆದ 2019ರಲ್ಲಿ ಮಾರ್ಚ್‌ 10ರ ಭಾನುವಾರ ಲೋಕಸಭಾ ಚುನಾವಣೆ ಘೋಷಣೆ ಆಗಿತ್ತು. ಕೇಂದ್ರ ಚುನಾವಣಾ ಆಯೋಗ ಒಟ್ಟು 7 ಹಂತದಲ್ಲಿ ಮತದಾನ ನಡೆದಿತ್ತು. 11 ಏಪ್ರಿಲ್ 2019 ರಿಂದ 19 ಮೇ 2019ರವರೆಗೆ 17ನೇ ಲೋಕಸಭಾ ಚುನಾವಣೆ ನಡೆದಿತ್ತು. 2019ರ ಮೇ 23 ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು.

ಕರ್ನಾಟಕದಲ್ಲಿ 2019ರ ಏಪ್ರಿಲ್‌ 18 ಮತ್ತು ಏಪ್ರಿಲ್‌ 23ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. ಈ ಬಾರಿಯೂ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯುವುದು ಬಹುತೇಕ ಪಕ್ಕಾ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BIG BREAKING: ನಾಳೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ; ಕರ್ನಾಟಕದಲ್ಲಿ 2 ಹಂತದ ಮತದಾನ?

https://newsfirstlive.com/wp-content/uploads/2023/10/ELECTION_RAJIV_KUMAR.jpg

Load More