newsfirstkannada.com

BREAKING: ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; ಜಯಪ್ರಕಾಶ್ ಹೆಗ್ಡೆ ಹೇಳಿದ್ದೇನು?

Share :

Published February 29, 2024 at 3:28pm

Update February 29, 2024 at 3:40pm

    ಬಹು ನಿರೀಕ್ಷಿತ ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

    ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಕೆ

    ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗುರಿಯಾಗಿದ್ದ ಜಾತಿ ಗಣತಿ

ಬೆಂಗಳೂರು: ಬಹು ನಿರೀಕ್ಷಿತ ಹಾಗೂ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕಿಚ್ಚು ಹಚ್ಚಿದ್ದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ವರದಿ ಸಲ್ಲಿಕೆಗೆ ಕೂಡಿಬಂತು ಕಾಲ.. ಇಂದು ಸಿಎಂ ಕೈ ಸೇರಲಿದೆ ರಿಪೋರ್ಟ್​

ವಿಧಾನಸೌಧದಲ್ಲಿ ಸಿಎಂಗೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು 2014-15ರಲ್ಲಿ ದತ್ತಾಂಶ ಸಂಗ್ರಹ ಮಾಡಿದ್ದ ವರದಿಯನ್ನು ಸಿಎಂಗೆ ಸಲ್ಲಿಸಿದ್ದೇವೆ. ಸಿಎಂ ಮುಂದಿನ ಸಂಪುಟ ‌ಸಭೆಯಲ್ಲಿ ವರದಿಯನ್ನು ಇಡುವುದಾಗಿ ಹೇಳಿದ್ದಾರೆ. ನಾವು ವರದಿ ಸರ್ಕಾರಕ್ಕೆ ನೀಡಿದ್ದೇವೆ. ಮುಂದಿನ ಬೆಳವಣಿಗೆ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತೆ. ಸಂಪೂರ್ಣ ವರದಿ ಓದದೆ ಜಾತಿಗಣತಿ ವರದಿ ಅವೈಜ್ಞಾನಿಕ ಅನ್ನೋದು ಸರಿಯಲ್ಲ. ಈ ವರದಿಯಲ್ಲಿ ಎಲ್ಲಾ ಸದಸ್ಯರ ಸಹಿ ಇದೆ. ಇದು ಕಾಂತರಾಜ್ ವರದಿಗೆ ಉತ್ತರ ನೀಡುವ‌ ವರದಿಯಾಗಿದೆ ಎಂದು ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಸಚಿವ ಶಿವರಾಜ್ ತಂಗಡಗಿ ಅವರು ಇದು ಜಾತಿ ಗಣತಿ ವರದಿ ಅಲ್ಲ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ವರದಿ. ಈ ವರದಿಗೆ ಯಾರದ್ದು ವಿರೋಧ ಇಲ್ಲ. ಈಗ ವರದಿ ಸ್ವೀಕಾರ ಮಾಡ್ತೀವಿ. ಅದ್ರಲ್ಲಿ ಏನ್ ಮಾಹಿತಿ ಇದೆ ಗೊತ್ತಿಲ್ಲ. ವರದಿಯನ್ನು ಯಾರು ನೋಡಿಲ್ಲ ಈಗ ಸಲ್ಲಿಕೆಯಾಗ್ತಿದೆ ಹೀಗಾಗಿ ಅಸಮಾಧಾನ ಪ್ರಶ್ನೆ ಇಲ್ಲ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್ ಶಾಸಕ ಪುಟ್ಟರಂಗ ಶೆಟ್ಟಿ ಅವರು, ಈ ಹಿಂದೆ ಹೆಚ್‌.ಡಿ ಕುಮಾರಸ್ವಾಮಿಯವರು ಸ್ವೀಕರಿಸಿರಲಿಲ್ಲ. ಇದೀಗ ಸಿದ್ದರಾಮಯ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ. ಈಗಲಾದ್ರೂ ಒಬಿಸಿ ಸಮುದಾಯಗಳಿಗೆ ನ್ಯಾಯ ಸಿಗಲಿ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಜಾತಿ ಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ; ಜಯಪ್ರಕಾಶ್ ಹೆಗ್ಡೆ ಹೇಳಿದ್ದೇನು?

https://newsfirstlive.com/wp-content/uploads/2024/02/CM_SIDDARAMAIAH_JPN.jpg

Load More