newsfirstkannada.com

×

ಬಿಜೆಪಿ ಕಾಲದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ‘SIT’; ಸಿದ್ದರಾಮಯ್ಯ ಸರ್ಕಾರದ ಮಾಸ್ಟರ್ ಪ್ಲಾನ್‌ ಏನು?

Share :

Published June 27, 2023 at 12:36pm

Update June 27, 2023 at 1:27pm

    ಬಿಜೆಪಿ ನಾಯಕರನ್ನು ಕಟ್ಟಿ ಹಾಕಲು ‘ಎಸ್​ಐಟಿ’ ವ್ಯೂಹ

    ಗ್ಯಾರಂಟಿ ಯೋಜನೆಗಳಿಗಾಗಿ ಬಿಜೆಪಿಯಿಂದ ಪ್ರತಿಭಟನೆ

    ಭ್ರಷ್ಟಾಚಾರ ಆರೋಪಗಳ ತನಿಖೆಗೆ ಸರ್ಕಾರದಿಂದ ಸಿದ್ಧತೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹೋರಾಟ, ಪ್ರತಿಭಟನೆಗೆ ಸಜ್ಜಾಗಿರುವ ಬಿಜೆಪಿ ನಾಯಕರನ್ನು ಕಟ್ಟಿ ಹಾಕಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಎಸ್‌ಐಟಿ ಅಸ್ತ್ರ ಪ್ರಯೋಗಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಬಿಜೆಪಿ ವಿರುದ್ಧ ಎಸ್​ಐಟಿ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಎಸ್​ಐಟಿ ಅಂದ್ರೆ ವಿಶೇಷ ತನಿಖಾ ತಂಡ ರಚಿಸೋದು ಬಹುತೇಕ ಪಕ್ಕಾ ಎನ್ನಲಾಗಿದೆ. ಈಗಾಗಲೇ ತನಿಖೆಗೆ ಅಗತ್ಯವಾದ ಮಾಹಿತಿಯನ್ನು ಸಂಗ್ರಹ ಮಾಡಲಾಗಿದೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕಮಲಕ್ಕೆ ‘ಎಸ್​ಐಟಿ’ ವ್ಯೂಹ
ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಹೋರಾಟಕ್ಕೆ ಬಿಜೆಪಿ ಹೈಕಮಾಂಡ್‌ನಿಂದಲೇ ಒತ್ತಡವೂ ಇದೆ. ಹೀಗಿರುವಾಗ ಕೇಸರಿ ಪಡೆಯನ್ನ ಕಟ್ಟಿ ಹಾಕಲು ಸಿದ್ದರಾಮಯ್ಯ ಸರ್ಕಾರ ಎಸ್‌ಐಟಿ ಅಸ್ತ್ರ ಪ್ರಯೋಗಕ್ಕೆ ಪ್ಲಾನ್ ಮಾಡಿದೆ.

ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರ ಆರೋಪಗಳ ತನಿಖೆಗೆ ಈ ಹಿಂದಿನ ಸಂಪುಟ ಸಭೆಯಲ್ಲಿ ಹಲವು ಸಚಿವರು ಒತ್ತಡ ಹಾಕಿದ್ದರು. ಸಚಿವರಾದ ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಸಚಿವರಿಂದ ಹಗರಣಗಳ ತನಿಖೆ ನಡೆಸುವಂತೆ ಒತ್ತಾಯ ಮಾಡಲಾಗಿತ್ತು. ಹೀಗಾಗಿ ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಹಗರಣಗಳ ತನಿಖೆಗೆ SIT ರಚಿಸಲು ರಾಜ್ಯ ಸರ್ಕಾರ ಈಗಾಗಲೇ ಸಿದ್ಧತೆಯನ್ನು ನಡೆಸಿದೆ. ಯಾವ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಮಾಹಿತಿ ಸಂಗ್ರಹ ಮಾಡಲಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಏನೇನು ಭ್ರಷ್ಟಾಚಾರ ನಡೆದಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದ್ದು, ಎಸ್‌ಐಟಿ ತನಿಖೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ  

ಬಿಜೆಪಿ ಕಾಲದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ‘SIT’; ಸಿದ್ದರಾಮಯ್ಯ ಸರ್ಕಾರದ ಮಾಸ್ಟರ್ ಪ್ಲಾನ್‌ ಏನು?

https://newsfirstlive.com/wp-content/uploads/2023/06/SIDDARAMAIAH-13-1.jpg

Load More