newsfirstkannada.com

5, 8, 9ನೇ ತರಗತಿಯ ಬೋರ್ಡ್‌ ಪರೀಕ್ಷೆಗೆ ಮತ್ತೆ ಬ್ರೇಕ್‌! ಸುಪ್ರೀಂಕೋರ್ಟ್‌ ಮಹತ್ವದ ಆದೇಶ

Share :

Published March 12, 2024 at 5:43pm

Update March 12, 2024 at 6:00pm

    ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ತಡೆ

    ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್​ ಮಧ್ಯಂತರ ಆದೇಶ

    ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಇಂದು ತಡೆಯಾಜ್ಞೆ

ನವದೆಹಲಿ: ರಾಜ್ಯದ 5, 8, 9ನೇ ತರಗತಿಯಲ್ಲಿ ಬೋರ್ಡ್ ಎಕ್ಸಾಂ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದ್ದು, 5, 8, 9ನೇ ತರಗತಿಯಲ್ಲಿ ಸದ್ಯಕ್ಕೆ ಬೋರ್ಡ್‌ ಪರೀಕ್ಷೆ ನಡೆಸುವಂತಿಲ್ಲ. ಸುಪ್ರೀಂ ಮಹತ್ವದ ಆದೇಶದ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪರೀಕ್ಷೆಗಳನ್ನು ರಾಜ್ಯದ ಶಿಕ್ಷಣ ಇಲಾಖೆ ಮುಂದೂಡಿದೆ.

ಕರ್ನಾಟಕದ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಹಾಗೂ ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿದಾರರ ಪರ ಹಿರಿಯ ವಕೀಲ ಕೆ.ವಿ.ಧನಂಜಯ್ ವಾದ ಮಂಡಿಸಿದ್ದರು. ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದ್ದು, ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯ ಸಂಪೂರ್ಣ ವಾದ ಮಂಡಿಸಿ ತೀರ್ಪು ನೀಡುವವರೆಗೂ ಬೋರ್ಡ್ ಎಕ್ಸಾಂ ನಡೆಸಬಾರದು ಎಂದು ಸೂಚಿಸಿದೆ.

ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾ.ಪಂಕಜ್ ಮಿತ್ತಲ್ ಅವರಿಂದ ನ್ಯಾಯಪೀಠ ಹೈಕೋರ್ಟ್‌ ವಿಭಾಗೀಯ ಪೀಠ ಮೇಲ್ಮನವಿ ಅರ್ಜಿಯ ಅಂತಿಮ‌ ತೀರ್ಪು ನೀಡುವವರೆಗೂ ಬೋರ್ಡ್ ಎಕ್ಸಾಂಗೆ ಬ್ರೇಕ್ ನೀಡಿ ಆದೇಶಿಸಿದೆ.

ಕಳೆದ ಮಾರ್ಚ್ 7ರಂದು 5, 8, 9, 11ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್​ ಮಧ್ಯಂತರ ಆದೇಶ ನೀಡಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್​​ ವಿಭಾಗೀಯ ಪೀಠ 5, 8 , 9, 11ನೇ ತರಗತಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಈ ಹಿಂದೆಯೇ ರಾಜ್ಯ ಪಠ್ಯಕ್ರಮವಿರೋ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ಸ್ಟೇಟ್​ ಲೆವೆಲ್​​ ಬೋರ್ಡ್​​ ಎಕ್ಸಾಮ್ಸ್​​ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್​​ ರದ್ದು ಮಾಡಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

5, 8, 9ನೇ ತರಗತಿಯ ಬೋರ್ಡ್‌ ಪರೀಕ್ಷೆಗೆ ಮತ್ತೆ ಬ್ರೇಕ್‌! ಸುಪ್ರೀಂಕೋರ್ಟ್‌ ಮಹತ್ವದ ಆದೇಶ

https://newsfirstlive.com/wp-content/uploads/2024/02/PUC_EXAMS.jpg

Load More