newsfirstkannada.com

ಮಹಿಳಾ ಮೀಸಲಾತಿ ಬಿಲ್‌ ನಮ್ಮದು.. ಹೊಸ ಸಂಸತ್‌ ಭವನದ ಎಂಟ್ರಿಗೆ ಮುನ್ನ ದಾಳ ಉರುಳಿಸಿದ ಸೋನಿಯಾ ಗಾಂಧಿ

Share :

19-09-2023

    ಇಂದು ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆ

    ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದ ಸೋನಿಯಾ ಗಾಂಧಿ

    ಸದ್ಯ ಸಂಸತ್ತಿನ ಸದಸ್ಯರಲ್ಲಿ 14.4% ಮಾತ್ರ ಮಹಿಳೆಯರು

ನವದೆಹಲಿ: ಹಳೇ ಸಂಸತ್ ಭವನದ ಕಾರ್ಯ ಕಲಾಪಗಳನ್ನು ಮುಗಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದರು ಹೊಸ ಸಂಸತ್‌ ಭವನಕ್ಕೆ ಎಂಟ್ರಿ ಆಗಿದ್ದಾರೆ. ಇಂದು ನೂತನ ಸಂಸತ್‌ ಭವನದಲ್ಲಿ ನಡೆಯಲಿರುವ ಕಾರ್ಯ ಕಲಾಪ ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಮೊದಲ ದಿನವೇ ನೂತನ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಚರ್ಚೆಗೆ ಬರುವ ಸಾಧ್ಯತೆ ಇದೆ. ಈ ನಿರೀಕ್ಷೆಯ ಮಧ್ಯೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ನಮ್ಮದು.. ನಮ್ಮ ಸರ್ಕಾರವೇ ಮಂಡನೆ ಮಾಡಿದ್ದು ಎಂದಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಈಗಾಗಲೇ ಗ್ರೀನ್‌ಸಿಗ್ನಲ್ ಸಿಕ್ಕಿದೆ. ಈ ಮೂಲಕ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2014, 2019ರ ಲೋಕಸಭೆ ಚುನಾವಣೆಯಲ್ಲಿ ದೇಶದ ಜನತೆಗೆ ನೀಡಿದ್ದ ಭರವಸೆಯನ್ನು ಈಡೇರಿಸಲು ಪಣ ತೊಟ್ಟಿದೆ. ಸಂಪುಟ ಸಭೆಯಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, 2027ರ ವೇಳೆಗೆ ಮಹಿಳಾ ಮೀಸಲಾತಿ ಮಸೂದೆ ಸಂಪೂರ್ಣವಾಗಿ ಜಾರಿಯಾಗಲಿದೆ. ಇದು ಸಂಸದರಿಗೆ ಅಗ್ನಿ ಪರೀಕ್ಷೆ ಎಂದು ಬಣ್ಣಿಸಿದ್ದಾರೆ. ಈ ಮೂಲಕ ಹೊಸ ಸಂಸತ್ ಭವನದ ಮೊದಲ ದಿನವೇ ಮಹಿಳಾ ಮೀಸಲಾತಿ ಮಸೂದೆ ಚರ್ಚೆಗೆ ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಇತಿಹಾಸದ ಪುಟಗಳಲ್ಲಿ ದಾಖಲಾದ ಹಳೇ ಸಂಸತ್; ಫೋಟೋ ಸೆಷನ್​ ವೇಳೆ ಹಿಂದಿನ ಸಾಲಿನಲ್ಲಿ ನಿಂತ ರಾಹುಲ್ ಗಾಂಧಿ!

ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಪ್ರಧಾನಿ ಮೋದಿ ಸರ್ಕಾರ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಪಕ್ಷಗಳಿಂದ ಪಕ್ಷಾತೀತ ಬೆಂಬಲ ವ್ಯಕ್ತವಾಗಿದೆ. ಆದ್ರೆ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕ್ರೆಡಿಟ್ ದಾಳ ಉರುಳುಸಿದ್ದಾರೆ. ಲೋಕಸಭೆಗೆ ಆಗಮಿಸುವಾಗ ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ನಮ್ಮದು ಎಂದಿದ್ದಾರೆ. ಸದ್ಯ ಸೋನಿಯಾ ಗಾಂಧಿ ಅವರು ಇದು ನಮ್ಮದು, ನಮ್ಮ ಸರ್ಕಾರವೇ ಮೊದಲ ಸಂಸತ್‌ನಲ್ಲಿ ಮಂಡನೆ ಮಾಡಿದ್ದು ಎಂದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮಹಿಳಾ ಮೀಸಲಾತಿ ಮಸೂದೆ ಜಾರಿಯಾದ್ರೆ ಮುಂಬರುವ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಸಿಗಲಿದೆ. ಸದ್ಯ ಸಂಸತ್ತಿನ ಸದಸ್ಯರಲ್ಲಿ 14.4% ಮಾತ್ರ ಮಹಿಳೆಯರಿದ್ದಾರೆ. ವಿಧಾನಸಭೆಗಳಲ್ಲಿ ಮಹಿಳಾ ಸದಸ್ಯೆಯರ ಸಂಖ್ಯೆ ತೀರಾ ಕಡಿಮೆ ಇದೆ. ರಾಷ್ಟ್ರೀಯ ಸರಾಸರಿ ಮಹಿಳಾ ಸದಸ್ಯರ ಪ್ರಮಾಣ ಶೇ.9 ಆಗಿದೆ.

2008ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರ ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆ ಮಾಡಿತ್ತು. 2010ರ ಮಾರ್ಚ್​ 9ರಂದು ರಾಜ್ಯಸಭೆ ಮಹಿಳಾ ಮೀಸಲಾತಿ ಮಸೂದೆಯನ್ನು ಅನುಮೋದಿಸಿತ್ತು. ಆದ್ರೆ, ಮಸೂದೆಯನ್ನ ಲೋಕಸಭೆಯಲ್ಲಿ ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಈ ಹಿನ್ನೆಲೆ ಇಂದಿನಿಂದ ನಡೆಯುತ್ತಿರುವ ನೂತನ ಸಂಸತ್ ಭವನದ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ವಿಚಾರವೇ ಮುಖ್ಯ ವಿಷಯ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಮಹಿಳಾ ಮೀಸಲಾತಿ ಬಿಲ್‌ ನಮ್ಮದು.. ಹೊಸ ಸಂಸತ್‌ ಭವನದ ಎಂಟ್ರಿಗೆ ಮುನ್ನ ದಾಳ ಉರುಳಿಸಿದ ಸೋನಿಯಾ ಗಾಂಧಿ

https://newsfirstlive.com/wp-content/uploads/2023/09/Soniya-Gandhi-On-Womens-Bill.jpg

Load More