ಇಡೀ ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಭರ್ಜರಿ ಮಳೆ; ನೀವು ಓದಲೇಬೇಕಾದ ಸ್ಟೋರಿ

author-image
Ganesh Nachikethu
Updated On
ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ವರುಣನ ಆರ್ಭಟ; ಎಲ್ಲೆಲ್ಲಿ ಟ್ರಾಫಿಕ್ ಜಾಮ್‌?
Advertisment
  • ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭರ್ಜರಿ ಮಳೆ
  • ರಾಜ್ಯ ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
  • ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ತುಂತುರು ಮಳೆ ರಗಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಶುರುವಾದ ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ಇಂದಿನಿಂದ 2 ದಿನಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚಳಿಗೆ ತತ್ತರಿಸಿದ ಬೆಂಗಳೂರಿಗರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ತಮಿಳುನಾಡಿನ ಪೂರ್ವ ಕರಾವಳಿ ಸೇರಿದಂತೆ ಕನ್ಯಾಕುಮಾರಿ ಹಾಗೂ ಶ್ರೀಲಂಕಾ ಕಡಲ ತೀರ ಪ್ರದೇಶದಲ್ಲಿ ಕಡಿಮೆ ಒತ್ತಡ ಸೃಷ್ಟಿಯಾಗಿದೆ. ತಮಿಳುನಾಡು ಹಾಗೂ ಪುದುಚೇರಿಯಾದ್ಯಂತ ಧಾರಾಕಾರ ಮಳೆಯಾಗ್ತಿದೆ. ಸೈಕ್ಲೋನ್ ಎಫೆಕ್ಟ್​ನಿಂದ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಶುರುವಾಗಿದೆ. ಗುರುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಕಳೆದ 12 ಗಂಟೆಗಳಿಂದ ಬೆಂಗಳೂರಿನಲ್ಲಿ ಶುರುವಾದ ತುಂತುರು ಮಳೆ ಇನ್ನೂ ನಿಂತೇ ಇಲ್ಲ.

ರಾಜಧಾನಿಯ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಮಳೆಯಾಗ್ತಿದೆ. ಚಿಕ್ಕಬಳ್ಳಾಪುರದಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದೆ. ಜಿಟಿಜಿಟಿ ಮಳೆಗೆ ವಾಹನ ಸವಾರರ ಪರದಾಡಿದ್ರು, ಜೊತೆಗೆ ಶಾಲಾ-ಕಾಲೇಜುಗಳು, ಕೆಲಸ ಕಾರ್ಯಗಳಿಗೆ ಹೋಗುವವರು ಹೈರಾಣಾದ್ರು.

48 ಗಂಟೆಗಳ ಭರ್ಜರಿ ಮಳೆ

ಇನ್ನು. ಮುಂದಿನ 48 ಗಂಟೆಗಳ ಭರ್ಜರಿ ಮಳೆ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತಮಳೆಯಾಗುವ ಸಾಧ್ಯತೆ ಇದೆ, ಇನ್ನು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ನಂದಿನಿ ಹಾಲು ಖರೀದಿ ಮಾಡೋ ಗ್ರಾಹಕರಿಗೆ ಬಿಗ್​ ಶಾಕ್​​; ಲೀಟರ್​​ಗೆ 5 ರೂ. ಏರಿಕೆಗೆ ಚಿಂತನೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment