/newsfirstlive-kannada/media/post_attachments/wp-content/uploads/2024/05/Bangalore-Rains-1.jpg)
ಬೆಂಗಳೂರು: ಫೆಬ್ರವರಿ ಮೊದಲ ವಾರದಲ್ಲೇ ಭರ್ಜರಿ ಮಳೆ ಮುನ್ಸೂಚನೆ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಫೆಬ್ರವರಿ 1 ಮತ್ತು 2ನೇ ತಾರೀಖು ತೀವ್ರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿದು ಬಂದಿದೆ. ಇನ್ನು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಭಾಗಗಳಲ್ಲಿ ಮಳೆ ಜೋರಾಗಿರಲಿದೆ. ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆಯಲ್ಲೂ ಮಳೆ ಹೆಚ್ಚಾಗಿರಲಿದೆ.
ರಾಮನಗರ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿಯಲ್ಲೂ ಮಳೆ ಆಗಲಿದೆ. ಒಟ್ನಲ್ಲಿ ವಾರಾಂತ್ಯಕ್ಕೆ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ಕೊಟ್ಟ ಬಿಸಿಸಿಐ; ಟೀಮ್ ಇಂಡಿಯಾದಿಂದಲೇ ಔಟ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ