ನಾಳೆ ಬೆಂಗಳೂರಲ್ಲಿ ವಿದ್ಯುತ್​​ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್​​ ಇರಲ್ವಾ? ಚೆಕ್​ ಮಾಡಿ!

author-image
Ganesh Nachikethu
Updated On
ನಾಳೆ ಬೆಂಗಳೂರಲ್ಲಿ ವಿದ್ಯುತ್​​ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್​​ ಇರಲ್ವಾ? ಚೆಕ್​ ಮಾಡಿ!
Advertisment
  • ಕಳೆದೊಂದು ವಾರದಿಂದ ಇಡೀ ರಾಜ್ಯಾದ್ಯಂತ ಜೋರು ಮಳೆ..!
  • ಅದರಲ್ಲೂ ಬೆಂಗಳೂರಲ್ಲಿ ಎಡಬಿಡದೆ ಮಳೆ ಸುರಿಯುತ್ತಲೇ ಇದೆ
  • ಇದರ ಮಧ್ಯೆ ಬೆಂಗಳೂರು ನಿವಾಸಿಗಳಿಗೆ ಒಂದು ಶಾಕಿಂಗ್​ ನ್ಯೂಸ್

ಬೆಂಗಳೂರು: ಕಳೆದೊಂದು ವಾರದಿಂದ ಇಡೀ ರಾಜ್ಯಾದ್ಯಂತ ಜೋರು ಮಳೆ ಆಗುತ್ತಿದೆ. ಅದರಲ್ಲೂ ಬೆಂಗಳೂರಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವು ಏರಿಯಾಗಳಲ್ಲಿ ಪ್ರಮುಖ ರಸ್ತೆಗಳು ಜಲಾವೃತ ಆಗಿವೆ. ಇಷ್ಟೇ ಅಲ್ಲ ಇನ್ನೂ ಕೆಲವು ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ಇದರ ಮಧ್ಯೆ ವಿದ್ಯುತ್​​ನಲ್ಲಿ ಭಾರೀ ಆಗಿತ್ತು. ಈಗ ನಾಳೆ ಕೂಡ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವ್ಯತ್ಯಯ ಆಗಲಿದೆ.

ನಾಳೆ ಎಂದರೆ ಅಕ್ಟೋಬರ್​ 23ನೇ ತಾರೀಕು 66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ವ್ಯಾಪ್ತಿಗೆ ಬರೋ ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದು ಬಂದಿದೆ.

ಎಲ್ಲೆಲ್ಲಿ ಕರೆಂಟ್​ ಇರಲ್ಲ?

ಹಾವನೂರು ಬಡಾವಣೆ, ಕುರುಬರಹಳ್ಳಿ, ರಾಜಾಜಿನಗರ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್, ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿ, ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾನಗರ, ಡಿಫೆನ್ಸ್ ಕಾಲೋನಿ, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಬಿಜೆಪಿಗೆ ದೊಡ್ಡ ಆಘಾತ; ಸಿ.ಪಿ ಯೋಗೇಶ್ವರ್‌ ದಿಢೀರ್​​ ರಾಜೀನಾಮೆ; ಕಾಂಗ್ರೆಸ್​​ ಸೇರ್ತಾರಾ?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment