ಇಂದು ರಾಜ್ಯಾದ್ಯಂತ ಭರ್ಜರಿ ಮಳೆ; ಮನೆಯಿಂದ ಹೊರಬರೋ ಮುನ್ನ ನೀವು ಓದಲೇಬೇಕಾದ ಸ್ಟೋರಿ

author-image
Ganesh Nachikethu
Updated On
ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ವರುಣನ ಆರ್ಭಟ; ಎಲ್ಲೆಲ್ಲಿ ಟ್ರಾಫಿಕ್ ಜಾಮ್‌?
Advertisment
  • ಫೆಂಗಲ್​​ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ!
  • ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ
  • ಫೆಂಗಲ್​ನಿಂದ​ ಚೇತರಿಸಿಕೊಳ್ಳುವ ಹೊತ್ತಲ್ಲೇ ಮತ್ತೆ ಮಳೆ ಕಾಟ

ಬೆಂಗಳೂರು: ಫೆಂಗಲ್​ ಚಂಡಮಾರುತದಿಂದ ಚೇತರಿಸಿಕೊಳ್ಳುವ ಹೊತ್ತಲ್ಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಇಂದು ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 24 ಗಂಟೆಗಳು ಭರ್ಜರಿ ಮಳೆ ಆಗಲಿದ್ದು, ಎಚ್ಚರ ವಹಿಸಬೇಕಿದೆ.

ಯೆಲ್ಲೋ ಅಲರ್ಟ್​ ಘೋಷಣೆ

ಗುರುವಾರ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಆಲರ್ಟ್​ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ಅಷ್ಟೇ ಅಲ್ಲ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ದಾವಣಗೆರೆ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಆಲಮಟ್ಟಿ, ಕಲಘಟಗಿ, ಭಾಗಮಂಡಲ, ಕೊಪ್ಪದಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಜತ್​ ಹೆಗಲಿಗೆ ಆರ್​​​ಸಿಬಿ ನಾಯಕತ್ವ; ಕ್ಯಾಪ್ಟನ್ಸಿ ಹೊಣೆ ಹೊರಲು ಪಾಟಿದಾರ್​ ಸಿದ್ಧ

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment