ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ನೀವು ಓದಲೇಬೇಕಾದ ಸ್ಟೋರಿ

author-image
Ganesh Nachikethu
Updated On
ಕೇರಳ ಬೆನ್ನಲ್ಲೇ ಬೆಂಗಳೂರಲ್ಲೂ ಭರ್ಜರಿ ಮಳೆ; ಮನೆಯಿಂದ ಹೊರಬರೋ ಮುನ್ನ ಎಚ್ಚರ! ಈ ರಸ್ತೆಗಳಲ್ಲಿ ಹೋಗಬೇಡಿ!
Advertisment
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಭರ್ಜರಿ ಮಳೆ
  • ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಅಬ್ಬರಿಸಲಿರೋ ವರಣ
  • ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಮುಂದಿನ 24 ಗಂಟೆಗಳ ಕಾಲ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನಗರದ ಹಲವೆಡೆ ಸಾಧಾರಣ ಮಳೆ ಆಗಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ.

ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ​​ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಡಿಸೆಂಬರ್ 24ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಕರಾವಳಿ ಭಾಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.

ಇದನ್ನೂ ಓದಿ:ಆರ್​​ಸಿಬಿ ಸೇರಿದ ಬೆನ್ನಲ್ಲೇ ಫಿಲ್​ ಸಾಲ್ಟ್​ಗೆ ಸುವರ್ಣಾವಕಾಶ; ಸ್ಟಾರ್​ ಆಟಗಾರನಿಗೆ ದೊಡ್ಡ ಲಾಟರಿ!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment