/newsfirstlive-kannada/media/post_attachments/wp-content/uploads/2024/05/Bangalore-Rains.jpg)
ಬೆಂಗಳೂರು: ಕರ್ನಾಟಕದಲ್ಲಿ ಚಳಿ ಮಧ್ಯೆಯೂ ಭಾರೀ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ 3 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಮೇತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡೂ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ.
3 ದಿನ ಎಲ್ಲೆಲ್ಲಿ ಮಳೆ?
ಇಂದಿನಿಂದ 3 ದಿನಗಳ ಕಾಲ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಷ್ಟೇ ಅಲ್ಲ, ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ.
ಮೋಡ ಕವಿದ ವಾತಾವರಣದ ಕಾರಣ ಚಳಿ ಪ್ರಮಾಣ ಕಡಿಮೆಯಾಗಲಿದೆ. ಬೆಂಗಳೂರಲ್ಲಿ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು, ಉಡುಪಿಯಲ್ಲಿ ವರುಣನ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:ಚರಿತ್ ಬಾಳಪ್ಪ ಲೈಂಗಿಕ ಕೇಸ್ಗೆ ಬಿಗ್ ಟ್ವಿಸ್ಟ್; ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸೀರಿಯಲ್ ನಟ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ