/newsfirstlive-kannada/media/post_attachments/wp-content/uploads/2025/07/MYS_GIRL.jpg)
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು ಆಟೋದಲ್ಲಿ ಹೋಗುತ್ತಿದ್ದ ಯುವತಿ ಸೇರಿದಂತೆ ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಮೈಸೂರಿನ ಅಗ್ರಹಾರದಲ್ಲಿ ಈ ಘಟನೆ ನಡೆದಿದೆ.
ಆಟೋದಲ್ಲಿ ಯುವತಿ ಸೇರಿ ಮೂವರು ತೆರಳುತ್ತಿದ್ದರು. ಈ ವೇಳೆ ಆಟೋವನ್ನು ಫಾಲೋ ಮಾಡಿಕೊಂಡು ಬಂದ ಕಾರಿನಲ್ಲಿದ್ದ ನಾಲ್ವರು ಸೇರಿ ಯುವತಿ ಹಾಗೂ ಆಟೋದಲ್ಲಿದ್ದ ಇನ್ನಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿ ಫಾಲೋ ಮಾಡಿಕೊಂಡು ಬಂದು ಈ ಕೃತ್ಯ ಎಸಗಿದ್ದಾರೆ. ಸದ್ಯ ಯುವತಿ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರೆಲ್ಲ ಮೈಸೂರು ತಾಲೂಕು ಮಹದೇವಪುರ ಗ್ರಾಮದವರು ಆಗಿದ್ದಾರೆ.
ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಓರ್ವ ಯುವತಿ ಸೇರಿ ಮೂವರ ಮೇಲೆ ಹಲ್ಲೆ ಮಾಡಲಾಗಿದೆ. ಕಾರಿನಲ್ಲಿ ಬಂದ ನಾಲ್ವರಿಂದ ಈ ಕೃತ್ಯ ನಡೆಸಲಾಗಿದ್ದು ಇದರಲ್ಲಿ ಮೂವರು ಲಾಂಗ್, ಮಚ್ಚು ಬೀಸಿ ಪರಾರಿಯಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ