ತಯಾರಿಸಿದ್ದ ವೋಟರ್ ಐಡಿ, ಆಧಾರ್ ಕಾರ್ಡ್ ಜನರಿಗೆ ಮಾರಾಟ
ಕಂಪ್ಯೂಟರ್ ಅಂಗಡಿಯನ್ನಿಟ್ಟು ವ್ಯಾಪಾರ ಮಾಡುತ್ತಿದ್ದ ಬಂಧಿತರು
ನಕಲಿ ವೋಟರ್ ಐಡಿಗಳನ್ನು ತಯಾರು ಮಾಡುತ್ತಿದ್ದ ಆರೋಪಿಗಳು
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾದ ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಅಪ್ತ ಮೌನೇಶ್ ಸೇರಿ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಚಿವರ ಆಪ್ತರಾದ ಭರತ್, ಮೌನೇಶ್, ರಾಘವೇಂದ್ರ ಬಂಧಿತ ಆರೋಪಿಗಳು. ಈ ಹಿಂದೆ ಮೂವರನ್ನು ಬಿಟ್ಟು ಕಳುಹಿಸಿದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ನಿನ್ನೆ ವಿಚಾರಣೆಗೆಂದು ಠಾಣೆಗೆ ಬಂದಿದ್ದಾಗ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇವರು ನಕಲಿ ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ಗಳನ್ನು ತಯಾರಿಸುತ್ತಿದ್ದರು.
ಬಂಧಿತರು ಒಂದು ಕಂಪ್ಯೂಟರ್ ಅಂಗಡಿಯನ್ನು ಇಟ್ಟುಕೊಂಡು ಅದರಲ್ಲಿ ನಕಲಿ ವೋಟರ್ ಐಡಿಗಳನ್ನು ತಯಾರು ಮಾಡುತ್ತಿದ್ದರು. ಬಳಿಕ ಇವುಗಳನ್ನು ಉತ್ತರ ಭಾರತದಿಂದ ಬಂದ ಜನರಿಗೆ ಹಣಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ 53 ನಕಲಿ ವೋಟರ್ ಐಡಿಗಳನ್ನು ವಶಕ್ಕೆ ಪಡೆಯಲಾಗಿದ್ದು ಅವುಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ನಿನ್ನೆ ಮೂವರು ಆರೋಪಿಗಳು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಬಂದಿದ್ದರು. ಇದೇ ವೇಳೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ