ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ತಿಂಗಳ ಮಗು ಸಾವು ಆರೋಪ
ಆರೋಗ್ಯ ಕೇಂದ್ರದ ಮುಂದೆ ಮೃತ ಕುಟುಂಬಸ್ಥರ ಪ್ರತಿಭಟನೆ
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಸುರೇಶ್ ಬಾಬು
ತುಮಕೂರು: ವೈದ್ಯರ ನಿರ್ಲಕ್ಷ್ಯದಿಂದ ಮೂರು ತಿಂಗಳ ಮಗು ಸಾವನ್ನಪ್ಪಿರೋ ಎಂಬ ಆರೋಪ ಕೇಳಿ ಬಂದಿದೆ. ಸೋಮನಹಳ್ಳಿ ಮೂಲದ ಮಧು, ಶೃತಿ ಎಂಬ ದಂಪತಿಗೆ ಸೇರಿದ ಮಗು ಇದಾಗಿದೆ. ಹೀಗಾಗಿ ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಯ್ಸಳ ಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದ ಮುಂದೆ ಪೋಷಕರು ವೈದ್ಯರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಮಗುವಿಗೆ ವೈದ್ಯರು ಲಸಿಕೆ ನೀಡಿದ ಕೇವಲ ಒಂದೇ ಗಂಟೆಯಲ್ಲಿ ಮಗು ಕೊನೆಯುಸಿರೆಳೆದಿದೆ. ವೈದ್ಯರು ಇಂಜೆಕ್ಷನ್ ನೀಡಿದ ಬಳಿಕ ಮನೆಗೆ ಹೋಗುವಾಗ ಮಾರ್ಗ ಮಧ್ಯೆ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಸದ್ಯ ಸರ್ಕಾರಿ ಆರೋಗ್ಯ ಕೇಂದ್ರದ ಮೃತ ಮಗು ಸಂಬಂಧಿಕರು ಜಮಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಕಸ ಸುರೇಶ್ ಬಾಬು ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಜತೆಗೆ ಮೃತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಈ ಸಂಬಂಧ ವೈದ್ಯರು ಸೇರಿ ಐವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ