ಐದು ಹುಲಿಗಳ ಮಾರಣಹೋಮ ಕೇಸ್​​.. ಮೂವರು ಅಧಿಕಾರಿಗಳ ತಲೆದಂಡ..!

author-image
Ganesh
ಐದು ಹುಲಿಗಳ ಮಾರಣಹೋಮ ಕೇಸ್​​.. ಮೂವರು ಅಧಿಕಾರಿಗಳ ತಲೆದಂಡ..!
Advertisment
  • ಚಾಮರಾಜನಗರ ಹುಲಿ ಕೇಸ್​ಗೆ ಮತ್ತೊಂದು ಕ್ರಮ
  • ನಾಲ್ಕು ಮರಿ, ಒಂದು ತಾಯಿ ಹುಲಿ ಅಸಹಜ ಸಾವು
  • ಅರಣ್ಯ ಇಲಾಖೆಯಿಂದ ಮಹತ್ವದ ಆದೇಶ ಹೊರಬಿದ್ದಿದೆ

ಚಾಮರಾಜನಗರದಲ್ಲಿ ಐದು ಹುಲಿಗಳ ಅಸಹಜ ಸಾವು ಪ್ರಕರಣ ಸಂಬಂಧ ಮೂವರು ಅಧಿಕಾರಿಗಳ ತಲೆದಂಡ ಆಗಿದೆ. ಡಿಸಿಎಫ್, ಎಸಿಎಫ್​ಗಳಿಗೆ ಕಡ್ಡಾಯ ರಜೆಯ ಮೇಲೆ ತೆರಳಲು ಅರಣ್ಯ ಇಲಾಖೆ ಆದೇಶ ನೀಡಿದೆ.

ಯಾರಿಗೆಲ್ಲ ಶಿಕ್ಷೆ..?

  • ಚಕ್ರಪಾಣಿ: ಉಪ ಅರಣ್ಯ ಸಂರಕ್ಷಣಾಧಿಕಾರಿ
  •  ಗಜಾನನ ಹೆಗ್ಡೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ
  •  ಮಾದೇಶ: ಉಪವಲಯ ಅರಣ್ಯಾಧಿಕಾರಿ

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿ. ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದರೂ, ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ಬಂದಿಲ್ಲ. ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರೋದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ.

ಇದನ್ನೂ ಓದಿ: ಅಂದು 600 ರೂ ಸಂಬಳ, ಇಂದು ದಿನಕ್ಕೆ 25 ಸಾವಿರ.. ಸಿನಿಮಾ ಟು ಕ್ರಿಕೆಟ್​ ‘ಚಕ್ರವರ್ತಿ’ ಕಹಾನಿ..!

ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗಿಲ್ಲ. ಕಳೆದ ಮೂರು ತಿಂಗಳಿನಿಂದ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡಲಿಲ್ಲ. ಇದರಿಂದ ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿರುತ್ತದೆ. ಇದಕ್ಕೆ ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹಾಗೂ ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ.

ಸಂಪೂರ್ಣ ತನಿಖೆಯ ಅಗತ್ಯ ಹಿನ್ನೆಲೆಯಲ್ಲಿ ಶಾಖೆಯ ಉಪವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶನ ನೀಡಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ತನಗೆ ಉಳಿಯಲು ಸರಿಯಾದ ಮನೆಯೇ ಇಲ್ಲ.. ಆದರೂ ಅಂಗನವಾಡಿಗಾಗಿ ಜಾಗ ದಾನ ಮಾಡಿದ ಅಜ್ಜಿ..!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment