/newsfirstlive-kannada/media/post_attachments/wp-content/uploads/2024/07/TRAIN-TRACK.jpg)
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಟ್ರ್ಯಾಕ್ ಮೇಲೆ ಮದ್ಯ ಸೇವಿಸುತ್ತಾ ಕುಳಿತಿದ್ದ ಮೂವರು ಯುವಕರ ಮೇಲೆ ಟ್ರೈನ್ ಹಾದು ಹೋಗಿ ಅನಾಹುತ ಆಗಿದೆ.
ಸ್ಥಳದಲ್ಲಿಯೇ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೌನೇಶ್ ಪತ್ತಾರ (23), ಸುನೀಲ್ (23), ವೆಂಕಟ ಭೀಮನಾಯ್ಕ (20) ಮೃತ ಯುವಕರು. ಕುಡಿತ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ ದುರ್ಘಟನೆ ನಡೆದಿದ್ದು, ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದು MBBS ವಿದ್ಯಾರ್ಥಿ ಸಾವು.. ಸ್ನೇಹಿತನ ಭೇಟಿಗೆ ಬಂದಾಗ ದುರಂತ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ