/newsfirstlive-kannada/media/post_attachments/wp-content/uploads/2024/11/RCB-5.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಮುಗಿದಿದೆ. ಐಪಿಎಲ್ ಮುಂದಿನ ಸೀಸನ್ ಆರಂಭಕ್ಕೆ ಇನ್ನೇನು ಕೇವಲ 2 ತಿಂಗಳು ಬಾಕಿ ಇದೆ. ಕಳೆದ 17 ಸೀಸನ್ಗಳಿಂದಲೂ ಕಪ್ ಗೆಲ್ಲುವಲ್ಲಿ ಎಡವಿದ ಆರ್ಸಿಬಿ ಈ ಬಾರಿ ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರನ್ನು ಖರೀದಿಸಿ ಬಲಿಷ್ಠ ತಂಡ ಕಟ್ಟಿದೆ. ಅದರಲ್ಲೂ ಯುವ ಆಟಗಾರರಿಗೆ ಮಣೆ ಹಾಕಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಟ್ರೋಫಿ ಗೆಲ್ಲಲು ಈಗಾಗಲೇ ತಯಾರಿ ಶುರು ಮಾಡಿದೆ.
ಎಂ. ಚಿನ್ನಸ್ವಾಮಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರರು ತಯಾರಿ ಆರಂಭಿಸಿದ್ದಾರೆ. ಈ ಬಾರಿ ಕಪ್ ಗೆಲ್ಲಲೇಬೇಕು ಎಂದು ಆರ್ಸಿಬಿ ಮ್ಯಾನೇಜ್ಮೆಂಟ್ ನಿರ್ಧಾರಕ್ಕೆ ಬಂದಿದೆ. ಹಾಗಾಗಿ ಆರ್ಸಿಬಿ ಹೆಡ್ ಕೋಚ್ ಆ್ಯಂಡಿ ಫ್ಲವರ್ ದೇಶೀಯ ಆಟಗಾರರೊಂದಿಗೆ ಅಭ್ಯಾಸ ಮಾಡಿಸುತ್ತಿದ್ದಾರೆ. ಈ ಬಾರಿ ಆರ್ಸಿಬಿಗೆ ಕಪ್ ಗೆಲ್ಲಿಸೋ ಆಟಗಾರರು ಇವರೇ ನೋಡಿ.
ಸ್ಫೋಟಕ ಬ್ಯಾಟರ್ ಜೇಕಬ್ ಬೆಥೆಲ್
ಇಂಗ್ಲೆಂಡ್ ತಂಡದ ಭರವಸೆಯ ಯುವ ಆಲ್ರೌಂಡರ್ ಜೇಕಬ್. ಇವರಿಗೆ ಕೇವಲ 21 ವರ್ಷ. ಇತ್ತೀಚೆಗೆ ನಡೆದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೋಬ್ಬರಿ 2.6 ಕೋಟಿ ನೀಡಿ ಖರೀದಿ ಮಾಡಿತ್ತು. ಸದ್ಯ ಟೆಸ್ಟ್ನಲ್ಲಿ ಅಬ್ಬರಿಸಿರೋ ಇವರು ಐಪಿಎಲ್ನಲ್ಲೂ ಆರ್ಸಿಬಿ ತಂಡದ ಪರ ಮಿಂಚುವ ನಿರೀಕ್ಷೆಯಲ್ಲಿದ್ದಾರೆ.
ಭುವೇಶ್ವರ್ ಕುಮಾರ್
ಭುವನೇಶ್ವರ್ ಕುಮಾರ್, ಟೀಂ ಇಂಡಿಯಾದ ಅನಭವಿ ಸ್ವಿಂಗ್ ಬೌಲರ್. ನವೆಂಬರ್ 2022ರಲ್ಲಿ ಭಾರತದ ಪರ ಕಡೆಯ ಬಾರಿಗೆ ಟಿ20 ಪಂದ್ಯ ಆಡಿದ್ದಾರೆ. ಭುವಿ ಅವರು ಫಾರ್ಮ್ಗೆ ಬಂದಿರೋದು ಆರ್ಸಿಬಿ ಫ್ರಾಂಚೈಸಿಗೆ ಖುಷಿಯಾಗಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್ಸಿಬಿ ಅವರನ್ನು 10.75 ಕೋಟಿ ರೂಪಾಯಿಗೆ ಖರೀದಿಸಿದೆ.
ಈ ಮೊದಲ ಭುವಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆಡುತ್ತಿದ್ದರು. 2014ರಲ್ಲಿ ಎಸ್ಆರ್ಹೆಚ್ನಲ್ಲಿದ್ದ ಭುವಿ, 2016, 2017ರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. 2016ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟ್ರೋಫಿಗೆ ಮುತ್ತಿಟ್ಟಿತ್ತು. ಅದಕ್ಕೆ ಭುವಿ ಅವರ ಪಾತ್ರ ಪ್ರಮುಖವಾಗಿತ್ತು.
ಫಿಲ್ ಸಾಲ್ಟ್
28 ವರ್ಷದ ಇಂಗ್ಲೆಂಡ್ ತಂಡದ ಸ್ಫೋಟಕ ಆಟಗಾರ ಫಿಲ್ ಸಾಲ್ಟ್ ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದಲೇ ಹೆಸರು ವಾಸಿ. ಇವರು ಇಂಗ್ಲೆಂಡ್ ತಂಡದ ಪರ 38 ಟಿ20 ಪಂದ್ಯಗಳಲ್ಲಿ 165.32 ಸ್ಟ್ರೈಕ್ ರೇಟ್‌ನಲ್ಲಿ 1106 ರನ್ ಸಿಡಿಸಿದ್ದಾರೆ. ಅದರಲ್ಲೂ ಇವರ ಟ್ರ್ಯಾಕ್ ರೆಕಾರ್ಡ್ ನೋಡಿ ಆರ್ಸಿಬಿ ಖರೀದಿ ಮಾಡಿದೆ.
ಸಾಲ್ಟ್ ತನ್ನ ಕರಿಯರ್ನಲ್ಲೇ ಶೇ. 28ರಷ್ಟು ಸಮಯ ಒಂದು ಓವರ್ನಲ್ಲಿ 6-8 ರನ್ ಗಳಿಸುತ್ತಾರೆ. ಶೇ. 30ರಷ್ಟು ಸಮಯ 1 ಓವರ್ನಲ್ಲಿ 12-15 ರನ್ ಕಲೆ ಹಾಕುತ್ತಾರೆ. 4 ಓವರ್ಗಳ ಪೈಕಿ 1ರಲ್ಲಿ 16ಕ್ಕೂ ಹೆಚ್ಚು ರನ್ ಸಿಡಿಸುತ್ತಾರೆ. ಆವರೇಜ್ 2 ಓವರ್ಗೆ ಒಮ್ಮೆ 12 ರನ್ ಬಾರಿಸೋ ಸಾಮರ್ಥ್ಯ ಇದೆ.
ಇದನ್ನೂ ಓದಿ:ಭಾರತ, ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ; ಬಲಿಷ್ಠ ತಂಡ ಪ್ರಕಟ; ಮೂವರು RCB ಸ್ಟಾರ್ ಆಟಗಾರರಿಗೆ ಅವಕಾಶ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ