/newsfirstlive-kannada/media/post_attachments/wp-content/uploads/2024/11/RCB.jpg)
ನಾಳೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ಟೀಮ್ ಇಂಡಿಯಾ, ಇಂಗ್ಲೆಂಡ್ ಮಧ್ಯೆ ಮೊದಲ ಟಿ20 ಪಂದ್ಯ ನಡೆಯಲಿದೆ. 5 ಟಿ20 ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ನಡೆಯಲಿದೆ.
ಇನ್ನು, ಇದಕ್ಕೂ ಮೊದಲೇ ಈ ಮಹತ್ವದ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಎಲೆವೆನ್ ಘೋಷಿಸಿದೆ. ಭಾರತ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ಕ್ಯಾಪ್ಟನ್ ಜೋಸ್ ಬಟ್ಲರ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇವರು ವಿಕೆಟ್ ಕೀಪಿಂಗ್ನಿಂದ ಹಿಂದೆ ಸರಿದಿದ್ದು, ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಆರ್ಸಿಬಿ ಸ್ಟಾರ್ಗೆ ಜಾಕ್ಪಾಟ್
ಇಂಗ್ಲೆಂಡ್ ತಂಡದಲ್ಲಿ ಹ್ಯಾರಿ ಬ್ರೂಕ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಜೋಸ್ ಬಟ್ಲರ್ ಬದಲಿಗೆ ಆರ್ಸಿಬಿ ಸ್ಟಾರ್ ಬ್ಯಾಟರ್ ಫಿಲ್ ಸಾಲ್ಟ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ. ಜೊತೆಗೆ ಅವರು ಬೆನ್ ಡಕೆಟ್ ಅವರೊಂದಿಗೆ ಇಂಗ್ಲೆಂಡ್ ಇನ್ನಿಂಗ್ಸ್ ತೆರೆಯಲಿದ್ದಾರೆ.
ಜಾಕೋಬ್ ಬೆಥೆಲ್ಗೂ ಚಾನ್ಸ್
ಇತ್ತೀಚೆಗೆ ನಡೆದ 2025ರ ಮೆಗಾ ಹರಾಜಿನಲ್ಲಿ ಆರ್ಸಿಬಿ ಯುವ ಬ್ಯಾಟರ್ ಜಾಕೋಬ್ ಬೆಥೆಲ್ ಅವರನ್ನು ಖರೀದಿ ಮಾಡಿತ್ತು. ಈಗ ಇವರು ಇಂಗ್ಲೆಂಡ್ ಆಡುವ ಹನ್ನೊಂದರ ಭಾಗವಾಗಿದ್ದಾರೆ. ಹೀಗಾಗಿ ಜಾಕೋಬ್ ಬೆಥೆಲ್ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಜತೆಗೆ ಸ್ಫೋಟಕ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ ಕೂಡ ಇದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್-11 ಹೀಗಿದೆ!
ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಬೆನ್ ಡಕೆಟ್, ಜೋಶ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಗ್ಯಾಶ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಮಾರ್ಕ್ ವುಡ್.
ಇದನ್ನೂ ಓದಿ:ಟೀಮ್ ಇಂಡಿಯಾ, ಇಂಗ್ಲೆಂಡ್ ಮಧ್ಯೆ ಮಹತ್ವದ ಪಂದ್ಯ; ಈ ಮುನ್ನವೇ ಬಿಗ್ ಶಾಕ್ ಕೊಟ್ಟ ಸ್ಟಾರ್ ಪ್ಲೇಯರ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ