/newsfirstlive-kannada/media/post_attachments/wp-content/uploads/2024/12/IND-vs-ENG.jpg)
ನಾಳೆಯಿಂದ ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಶುರುವಾಗಲಿದೆ. ನಾಗ್ಪುರ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಮೊದಲ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ ಆಗಿದೆ.
ಇತ್ತೀಚೆಗೆ ಟೀಮ್ ಇಂಡಿಯಾ ವಿರುದ್ಧ ಟಿ20 ಸರಣಿ ಸೋತ ಬೆನ್ನಲ್ಲೇ ಎಚ್ಚೆತ್ತ ಇಂಗ್ಲೆಂಡ್ ಟೀಮ್ ಒನ್ ಡೇ ಸೀರೀಸ್ ಗೆಲ್ಲಲೇಬೇಕು ಎಂದು ಮುಂದಾಗಿದೆ. ಹಾಗಾಗಿ ಏಕದಿನ ಸರಣಿಗಾಗಿ ಯುವ ಆಟಗಾರರ ಜತೆಗೆ ಅನುಭವಿಗಳಿಗೂ ಮಣೆ ಹಾಕಲಾಗಿದೆ. ಪ್ರಕಟಿತ ತಂಡದಲ್ಲಿ ಸ್ಟಾರ್ ಆಟಗಾರನಿಗೆ ಸ್ಥಾನ ನೀಡಲಾಗಿದೆ.
ಆರ್‌ಸಿಬಿ ಸ್ಟಾರ್ ಆಟಗಾರರಿಗೆ ಅವಕಾಶ
ಇನ್ನು, ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಯುವ ಆಟಗಾರ ಜೇಕಬ್ ಬೆಥೆಲ್. ಇವರಿಗೂ ಇಂಗ್ಲೆಂಡ್ ತಂಡದಲ್ಲಿ ಮತ್ತೊಮ್ಮೆ ಚಾನ್ಸ್ ಸಿಕ್ಕಿದೆ. ಕೊನೆಯ ಟಿ20 ಪಂದ್ಯದಲ್ಲಿ ಅಬ್ಬರಿಸಿದ್ದ ಫಿಲ್ ಸಾಲ್ಟ್ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ. ಜತೆಗೆ ಆರ್ಸಿಬಿಯ ಸ್ಟಾರ್ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟೋನ್ಗೂ ಅವಕಾಶ ಕೊಡಲಾಗಿದೆ. ಈ ಮೂವರು ಆಟಗಾರರು ಮುಂದಿನ ಬಾರಿ ಐಪಿಎಲ್ 2025ರಲ್ಲಿ ಆರ್‌ಸಿಬಿ ಪರ ಕಣಕ್ಕೆ ಇಳಿಯಲಿದ್ದಾರೆ.
/newsfirstlive-kannada/media/post_attachments/wp-content/uploads/2024/12/Phil-Salt-RCB.jpg)
ಗೆಲ್ಲಲೇಬೇಕಾದ ಒತ್ತಡದಲ್ಲಿ ಇಂಗ್ಲೆಂಡ್
ಟೀಮ್ ಇಂಡಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡ 4-1 ಅಂತರದಲ್ಲಿ ಹೀನಾಯ ಸೋಲು ಕಂಡಿತ್ತು. ಮುಂಬರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ನಡೆಯಲಿರೋ ಈ ಮಹತ್ವದ ಏಕದಿನ ಸರಣಿಯನ್ನು ಇಂಗ್ಲೆಂಡ್ ತಂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಹೀಗಿದೆ!
ಬೆನ್ ಡಕೆಟ್, ಫಿಲ್ ಸಾಲ್ಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.
ಇದನ್ನೂ ಓದಿ:ಬರೋಬ್ಬರಿ 15 ತಿಂಗಳ ನಂತರ ವಿಧ್ವಂಸಕ ಬ್ಯಾಟರ್ ಎಂಟ್ರಿ; ಟೀಮ್ ಇಂಡಿಯಾಗೆ ಬಂತು ಆನೆಬಲ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us