/newsfirstlive-kannada/media/post_attachments/wp-content/uploads/2025/05/accident-news.jpg)
ರಾಜ್ಯದಲ್ಲಿ ನಿನ್ನೆ ಮತ್ತು ಇಂದು ಭೀಕರ ರಸ್ತೆ ಅಪಘಾತಗಳು ಸಂಭವಿಸಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಐವರು ಉಸಿರು ನಿಲ್ಲಿಸಿದ್ದಾರೆ. ಶ್ವೇತ (29), ಅಂಜಲಿ(26), ಸಂದೀಪ್ (26), ವಿಠಲ್ (55), ಶಶಿಕಲಾ (40) ಮೃತರು ದುರ್ದೈವಿಗಳಾಗಿದ್ದಾರೆ.
ಮೃತ ಐವರು ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು. ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
/newsfirstlive-kannada/media/post_attachments/wp-content/uploads/2025/05/accident-news1.jpg)
ಇನ್ನೂ, ಬೆಳಗಾವಿಯಲ್ಲೂ ಎರಡು ಕಾರುಗಳು ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ಸಂಭವಿಸಿದೆ.
ಬೈಲಹೊಂಗಲದಿಂದ ಹಿರೇಬಾಗೇವಾಡಿಗೆ ಬರ್ತಿದ್ದ ಅಲ್ಟೋ ಕಾರು ಬೈಲಹೊಂಗಲ ಹೋಗುತ್ತಿದ್ದ ಕೀಯಾ ನಡುವೆ ಡಿಕ್ಕಿಯಾಗಿದ್ದಾರೆ.
ಅಲ್ಟೋ ಕಾರಿನಲ್ಲಿದ್ದ ಗಂಡ ಅಯುಮ್, ಹೆಂಡತಿ, ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ, ಕೀಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಪುತ್ರ ಅಪಘಾತ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅಲ್ಲದೇ ಅಲ್ಟೋ ಕಾರಿನಲ್ಲಿದ್ದ ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಶವವನ್ನು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದಾರೆ.
/newsfirstlive-kannada/media/post_attachments/wp-content/uploads/2025/05/accident-news2.jpg)
ಮತ್ತೊಂದು ಚಿತ್ರದುರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಬೋರ್ಡ್​ಗೆ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು, 26ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಶಹಾಪುರ ಮೂಲದ ನಿವಾಸಿ ಶಿವಪ್ಪ (36) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿ. ಕೆಎಸ್​ಆರ್​ಟಿಸಿ ಬಸ್​ ಯಾದಗಿರಿಯಿಂದ ಚಳ್ಳಕೆರೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳುತ್ತಿತ್ತು.
ಇದೇ ವೇಳೆ ಖಂಡೇನಹಳ್ಳಿ ಗೊಲ್ಲರಹಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಸಂಬಂಧ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us