ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ರಸ್ತೆ ಅಪಘಾತ
ಕಾರಿನಲ್ಲಿದ್ದ ನೆಲ್ಲೂರು ಜಿಲ್ಲೆಯ ಮೂವರು ಸ್ಥಳದಲ್ಲೇ ದಾರುಣ ಸಾವು
ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು ಟಿಟಿ ವಾಹನಕ್ಕೆ ಡಿಕ್ಕಿ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಟಿ ವಾಹನ, ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಡ್ಯಾನ್ಸ್ ಕೊರಿಯೋಗ್ರಾಫರ್ ಕೊ*ಲೆ ಕೇಸ್‌ಗೆ ಹೊಸ ಟ್ವಿಸ್ಟ್.. ರಾತ್ರಿ ಪಕ್ಕದಲ್ಲೇ ಮಲಗಿದ್ದ ಗೆಳತಿ ಬೆಳಗ್ಗೆ ಶಾಕ್!
ಟಿಟಿ ವಾಹನ ಆಂಧ್ರಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು ಹಾಗೂ ಪುಷ್ಪಾ ಎಂಬ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಟಿ ವಾಹನದಲ್ಲಿದ್ದ 12 ಮಂದಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್.. ತನಗಷ್ಟೇ ಬೇಲ್ ಪಡೆಯಲು ಪವಿತ್ರಾ ಪ್ಲಾನ್; ಏನದು?
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಎಸ್‌ಪಿ ಕುಶಾಲ್ ಚೌಕ್ಸೆ, ಚಿಂತಾಮಣಿ ಡಿವೈಎಸ್ಪಿ ಮುರಳಿಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ