/newsfirstlive-kannada/media/post_attachments/wp-content/uploads/2024/08/KLR-ACCIDENT.jpg)
ಕೋಲಾರ: ಔಡಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ಮುಖ್ಯ ರಸ್ತೆಯ ಸಹಕಾರ ನಗರ ಬಳಿ ನಡೆದಿದೆ.
ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಚ್ಚಲ್ ಮೃತ ದುರ್ದೈವಿಗಳು. ಮೃತರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದಾರೆ. ದುರ್ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ.
ಇದನ್ನೂ ಓದಿ:ವರ್ಗಾವಣೆಗೊಂಡಿದ್ದ PSI ಪರಶುರಾಮ ಹಠಾತ್ ಸಾವು; ಕುಟುಂಬಸ್ಥರಿಂದ ಗಂಭೀರ ಆರೋಪ
ಬಂಗಾರಪೇಟೆ ಮೂಲದ ಸಾಯಿ ಗಗನ್ ಬಚಾವ್ ಆಗಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಪುಡಿಪುಡಿಯಾಗಿದೆ. ಸಾಯಿ ಗಗನ್ ಮನೆಗೆ ಸ್ನೇಹಿತರು ಬಂದಿದ್ದರು. ಮನೆಯಿಂದ ಕೋಲಾರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನಿಡಿದ್ದಾರೆ.
ಇದನ್ನೂ ಓದಿ:ರೀಚಾರ್ಜ್ ಬೆಲೆ ಏರಿಸಿದ್ದ ಕಂಪನಿಗಳಿಗೆ TRAI ಗುನ್ನಾ.. ಮತ್ತೆ ಕಡಿಮೆ ಬೆಲೆಗೆ ಹೊಸ ಪ್ಲಾನ್..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ