ಒಂದೇ ಊರಿನ ಮೂವರು ವಿದ್ಯಾರ್ಥಿಗಳ ದಾರುಣ ಸಾವು
ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ SSLC, PUC ವಿದ್ಯಾರ್ಥಿಗಳು
ಮೂವರು ಒಂದೇ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಭೀಕರ ಅಪಘಾತ
ಚಿಕ್ಕಬಳ್ಳಾಪುರ: ಈ ಮಕ್ಕಳ ದುರಂತ ಅಂತ್ಯ ನಿಜಕ್ಕೂ ಘನಘೋರವಾದದ್ದು. ಚೆನ್ನಾಗಿ ಓದಿ SSLC, PUC ಪಾಸ್ ಮಾಡಬೇಕು. ಒಳ್ಳೆ ಭವಿಷ್ಯ ಕಟ್ಟಿಕೊಳ್ಳಬೇಕು ಅನ್ನೋ ಕನಸು ಕಾಣುತ್ತಿದ್ದ ಮೂವರು ವಿದ್ಯಾರ್ಥಿಗಳು ಇಂದು ಕಣ್ಣು ಮುಚ್ಚಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಗೇರಹಳ್ಳಿ ಗೇಟ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಹಾಗೂ ಬೈಕ್ ಡಿಕ್ಕಿಯಾಗಿದ್ದು ಮೂವರು ವಿದ್ಯಾರ್ಥಿಗಳು ಉಸಿರು ಚೆಲ್ಲಿದ್ದಾರೆ. ಒಂದೇ ಊರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಮೂವರನ್ನು ವೈಭವ್, ನಿತೀಶ್ (17) ಹಾಗೂ ನಿತೀನ್ (17) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಅವಲಗುರ್ಕಿ ಗ್ರಾಮದವರು.
ಇದನ್ನೂ ಓದಿ: ಮಹಾಲಕ್ಷ್ಮಿಯನ್ನ ಪೀಸ್, ಪೀಸ್ ಮಾಡಿದ್ಯಾಕೆ? ಸೈಕೋ ಕಿಲ್ಲರ್ ಎಲ್ಲಿ ಅಡಗಿದ್ದ? ಇಂಚಿಂಚು ಮಾಹಿತಿ ಬಹಿರಂಗ!
ಈ ಮೂವರು ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ವಿದ್ಯಾರ್ಥಿಗಳು. ನಿತೀಶ್ ಹಾಗೂ ನಿತಿನ್ ಬಿಜಿಎಸ್ ಶಾಲೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ವೈಭವ್ ಗುಡ್ ಶೆಫರ್ಡ್ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದರು.
ಎಂದಿನಂತೆ ಇವರು ಶಾಲೆ ಹಾಗೂ ಕಾಲೇಜು ಮುಗಿದ ಬಳಿಕ ಟ್ಯೂಷನ್‌ಗೆ ಹೋಗಿದ್ದರು. ಟ್ಯೂಷನ್ ಮುಗಿಸಿಕೊಂಡು ಮೂವರು ಒಂದೇ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾರ್ಥಿಗಳ ಶವದ ಬಳಿ ಸಂಬಂಧಿಕರ ಆಕ್ರಂದನ ಕರುಣಾಜನಕವಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ