ನ್ಯೂಸ್ ಫಸ್ಟ್ ಸಂದರ್ಶನದಲ್ಲಿ ಹುಲಿ ಉಗುರಿನ ಬಗ್ಗೆ ಜಗ್ಗೇಶ್ ಹೇಳಿಕೆ
ಜಗ್ಗೇಶ್ ವಿರುದ್ಧ ದೂರು ನೀಡಿರುವ ಮಾಜಿ MLC PR ರಮೇಶ್
ಜಗ್ಗೇಶ್ ಹೇಳಿಕೆಯ ವೀಡಿಯೋವನ್ನು ಅರಣ್ಯ ಇಲಾಖೆಗೆ ರವಾನೆ
ಕನ್ನಡದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ. ಇದರ ಬೆನ್ನಲ್ಲೇ ಸ್ಯಾಂಡಲ್ವುಡ್ನ ಖ್ಯಾತ ನಟ ನವರಸ ನಾಯಕ ಜಗ್ಗೇಶ್ ಅವರು ಕೂಡ ಹುಲಿ ಉಗುರು ಧರಿಸಿಕೊಂಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.
ಸದ್ಯ ಎಲ್ಲೆಲ್ಲೂ ಹುಲಿ ಉಗುರು ಕೊರಳಲ್ಲಿ ಹಾಕಿಕೊಂಡಿರುವುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಸ್ಯಾಂಡಲ್ವುಡ್ ನಟ ಹಾಗೂ ರಾಜಕಾರಣಿ ಜಗ್ಗೇಶ್ ಕೂಡ ಕತ್ತಲ್ಲಿ ಹುಲಿ ಉಗುರನ್ನು ಧರಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಹ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ನನಗೆ 20 ವರ್ಷ ಆಗಿದ್ದಾಗ ನನ್ನ ಮಗ ಹುಲಿ ಇದ್ದಂತೆ ಇರಬೇಕು ಎಂದು ಹೇಳಿ ನಿಜವಾದ ಹುಲಿಯ ಉಗರಲ್ಲಿ ಮಾಡಿಸಿರುವಂತ ಸರ ಎಂದು ಜಗ್ಗೇಶ್ ಅವರು ಹೇಳಿಕೊಂಡಿದ್ದರು.
ಜಗ್ಗೇಶ್ ವಿರುದ್ಧ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್ ಅವರು ದೂರು ದಾಖಲು ಮಾಡಿದ್ದಾರೆ. ಈ ವೇಳೆ ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಪಿ.ಆರ್ ರಮೇಶ್ ಅವರು, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ವಾಟ್ಸ್ಆ್ಯಪ್ ಮೂಲಕ ದೂರು ನೀಡಿದ್ದೇನೆ. ಇದಕ್ಕೆ ಅವರು ಸ್ಪಂದಿಸಿದ್ದು ಅವರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನೋಡೋಣ ಎಂದಿದ್ದಾರೆ. ಜಗ್ಗೇಶ್ ಹೇಳಿಕೆಯ ವೀಡಿಯೋವನ್ನು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ರವಾನೆ ಮಾಡಲಾಗಿದೆ. ನಟ ಜಗ್ಗೇಶ್ ಅವರನ್ನು ಇಲಾಖೆ ಅಧಿಕಾರಿಗಳು ಪ್ರಶ್ನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಈ ಬಗೆಗಿನ ವಿಡಿಯೋ, ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ. ಕಾನೂನು ಎಲ್ಲರಿಗೂ ಒಂದೇ ಎಂದಾದಲ್ಲಿ ಉಳಿದವರಿಗು ಶಿಕ್ಷೆ ಆಗಬೇಕು ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ