ಟಿಪ್ಪರ್ ಚಾಲಕನ ಅಜಾಗರೂಕತೆಗೆ ಬೈಂದೂರಿನಲ್ಲಿ ಓರ್ವ ಬಲಿ
ಪಿಕಪ್ ವಾಹನ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ
ಓರ್ವ ಸ್ಥಳದಲ್ಲೇ ದಾರುಣ ಸಾವು, ಮತ್ತೋರ್ವನ ಸ್ಥಿತಿ ಗಂಭೀರ
ಉಡುಪಿ: ಪಿಕಪ್ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿರೋ ಘಟನೆ ಬೈಂದೂರಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ರಾಜು ಗೌಡ (46) ಮೃತ ವ್ಯಕ್ತಿ.
ಪಿಕಪ್ ವಾಹನದಲ್ಲಿದ್ದ ಚಾಲಕ ಶಿವರಾಜ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಕೊಲ್ಲೂರು ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ