newsfirstkannada.com

ಶ್ರೀರಂಗಪಟ್ಟಣದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ​; ಮುನ್ನೆಚ್ಚರಿಕೆಯಾಗಿ ಭಾರೀ ಕಟ್ಟೆಚ್ಚರ, ನಿಷೇಧಾಜ್ಞೆ ಜಾರಿ

Share :

10-11-2023

    ಮೈಸೂರು ಸೇರಿದಂತೆ ಹಲವೆಡೆಯಿಂದ ಅಪಾರ ಜನ ಸೇರುವ ಸಾಧ್ಯತೆ

    ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ!

    ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧ

ಮಂಡ್ಯ: ಇಂದು ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಕೋಮುಸಂಘರ್ಷ ಉಂಟಾಗುವ ಭೀತಿ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಎಂದು ತಹಶೀಲ್ದಾರ್ ಪರುಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.

ಹೌದು, ಟಿಪ್ಪು ವಕ್ಫ್ ಎಸ್ಟೇಟ್​ನಿಂದ ಈ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರಮಾಣದಲ್ಲಿ ಜನರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ, ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ, ಪ್ರತಿಭಟನೆ, ಱಲಿಗಳಿಗೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಯನ್ನೂ ನಿಷೇಧ ಮಾಡಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶ್ರೀರಂಗಪಟ್ಟಣದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ​; ಮುನ್ನೆಚ್ಚರಿಕೆಯಾಗಿ ಭಾರೀ ಕಟ್ಟೆಚ್ಚರ, ನಿಷೇಧಾಜ್ಞೆ ಜಾರಿ

https://newsfirstlive.com/wp-content/uploads/2023/11/tipu.jpg

Load More