/newsfirstlive-kannada/media/post_attachments/wp-content/uploads/2024/02/Akash.jpg)
ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆಸಿದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ. 23 ವರ್ಷದ ಆಕಾಶ್​ ಈ ಕೃತ್ಯವೆಸಗಿದ್ದು ಪೊಲೀಸರು ಆತನನ್ನು ಅರೆಸ್ಟ್​ ಮಾಡಿದ್ದಾರೆ.
ಜನವರಿ 31ನೇ ತಾರೀಖು ಬೆಳಗ್ಗೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತಕ್ಕೆ ಆಕಾಶ್ ಚಪ್ಪಲಿ ಹಾರ ಹಾಕಿ ಎಸ್ಕೇಪ್ ಆಗಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಮುಸ್ಲಿಂ ಸಮುದಾಯದ ಜನ ಜಮಾಯಿಸಿದ್ದರು.
ಉಗ್ರ ಹೋರಾಟ ಮಾಡಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಬಳಿಕ 24 ಗಂಟೆಗಳ ಗಡುವು ನೀಡಿ ಪ್ರತಿಭಟನೆ ಕೈಬಿಡಲಾಗಿತ್ತು. ಸದ್ಯ ಕಿಡಿಗೇಡಿ ಆಕಾಶ್​ನ ಬಂಧನವಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ