/newsfirstlive-kannada/media/post_attachments/wp-content/uploads/2024/09/TIRUPATI_LADDU_NEW1.jpg)
ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ತಿರುಪತಿ ಲಡ್ಡು ಕಲಬೆರೆಕೆ ಪ್ರಕರಣಕ್ಕೆ ಪ್ರಮುಖ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಯಾಱರು?
ಟೆಂಡರ್ ಪಡೆಯುವ ಹಂತದಿಂದ ಪೂರೈಕೆ ಹಂತದವರೆಗೂ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತಾರಖಂಡ್ ರಾಜ್ಯದ ರೂರ್ಕಿ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿಯ ಸಿಇಓ ಅಪೂರ್ವ ಬಂಧಿತ ಆರೋಪಿಗಳು.
ತುಪ್ಪ ಪೂರೈಕೆ ನೆಪದಲ್ಲಿ ಆರೋಪಿಗಳ ವಿರುದ್ಧ ಅನೇಕ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಇದೆ. ತನಿಖೆ ವೇಳೆ ಇದು ದೃಢವಾಗಿದ್ದು, ಹೀಗಾಗಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ತುಪ್ಪದ ಟೆಂಡರ್ ಪಡೆಯಲು ನಕಲಿ ದಾಖಲೆಗಳು, ಸೀಲ್ ಬಳಕೆ ಮಾಡಿದ್ದಾರೆ. ಕೆಲವು ದಾಖಲೆಗಳನ್ನು ತಿರುಚಿದ್ದಾರೆ. ತುಪ್ಪ ಪೂರೈಕೆಯಲ್ಲೂ ವ್ಯತ್ಯಾಸ ಆಗಿರೋದನ್ನು ಸಿಬಿಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಘಟನೆ ಬಳಿಕ ಟಿಟಿಡಿ ಮರಳಿ ಕರ್ನಾಟಕದ ಕೆಎಂಎಫ್ನಿಂದ ತುಪ್ಪವನ್ನು ಖರೀದಿ ಮಾಡಿತ್ತು.
ಇದನ್ನೂ ಓದಿ: ತಿರುಪತಿ ಲಡ್ಡು ವಿವಾದಕ್ಕೆ ಟ್ವಿಸ್ಟ್.. ಮಹಾಶಾಂತಿ ಬೆನ್ನಲ್ಲೇ ಪ್ರಮಾಣ ಮಾಡಿದ ಭೂಮಲ ಕರುಣಾಕರರೆಡ್ಡಿ!
ಏನಿದು ಪ್ರಕರಣ..?
ತಿಮ್ಮಪ್ಪನ ಪ್ರಸಾದವಾಗಿ ತಿರುಪತಿಯಲ್ಲಿ ತಯಾರಿಸುವ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದರು. ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು. ಅವರ ಅವಧಿಯಲ್ಲಿ ತಿರುಮಲ ಲಡ್ಡು ಕೂಡ ಗುಣಮಟ್ಟವಿಲ್ಲದ ಪದಾರ್ಥಗಳಿಂದ ತಯಾರಿಸಲ್ಪಟ್ಟಿದೆ. ಕಳೆದ 5 ವರ್ಷಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕರು ತಿರುಮಲದ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ. ‘ಅನ್ನದಾನ’ (ಉಚಿತ ಆಹಾರ) ವಿಚಾರದಲ್ಲೂ ಗುಣಮಟ್ಟವನ್ನು ರಾಜಿ ಮಾಡಿಕೊಂಡರು. ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿ ಪವಿತ್ರ ತಿರುಮಲ ಲಡ್ಡುವನ್ನು ಕಲುಷಿತಗೊಳಿಸಿದರು. ಆದರೆ ನಾವೀಗ ಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ನಾವು ಟಿಟಿಡಿಯ ಪಾವಿತ್ರ್ಯತೆಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದರು. ಬೆನ್ನಲ್ಲೇ ಈ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿತ್ತು.
ಇದನ್ನೂ ಓದಿ: ಅಂತಿಮ ಘಟ್ಟ ತಲುಪಿದ ಕರ್ನಾಟಕ ಬಿಜೆಪಿ ಬಂಡಾಯ.. ಕುತೂಹಲ ಮೂಡಿಸಿದ ಹೈಕಮಾಂಡ್ ನಿರ್ಧಾರ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ