/newsfirstlive-kannada/media/post_attachments/wp-content/uploads/2023/08/Tirupati-Laddu.jpg)
ಬೆಂಗಳೂರು: ತಿರುಮಲ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬು ಬಳಕೆಯ ಆರೋಪ ಕೋಟಿ, ಕೋಟಿ ಭಾರತೀಯರ ನಂಬಿಕೆ, ಭಕ್ತಿಗೆ ಆಘಾತವನ್ನು ತಂದಿದೆ. ಲಡ್ಡು ಪ್ರಸಾದವನ್ನು ತಿಮ್ಮಪ್ಪನ ಪ್ರತಿಬಿಂಬ ಎಂದು ಭಾವಿಸಿದ್ದವರು ಒಂದು ಕ್ಷಣ ವಿಚಲಿತರಾಗುವಂತೆ ಮಾಡಿದೆ. ತಿರುಪತಿ ತಿಮ್ಮಪ್ಪನ ಈ ಪ್ರಸಾದದ ವಿವಾದಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಕೂಡ ಅಲರ್ಟ್ ಆಗಿದೆ.
ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಜಗನ್.. ತಿರುಮಲದಲ್ಲಿ ಅಸಲಿಗೆ ನಡೆದಿದ್ದೇನು?
ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ರಾಜ್ಯದ ಎಲ್ಲಾ ದೇವಾಲಯಗಳಿಗೂ ರಾಜ್ಯ ಸರ್ಕಾರ ಮಹತ್ವದ ಸೂಚನೆಯನ್ನು ನೀಡಿದೆ. ರಾಜ್ಯದ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಕಡ್ಡಾಯಗೊಳಿಸಲಾಗಿದೆ.
ಗುಣಮಟ್ಟದಲ್ಲಿ ನಂದಿನಿ ತುಪ್ಪ ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗಾಗಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಿಗೂ ಸರ್ಕಾರ ಮಹತ್ವದ ಆದೇಶ ನೀಡಿದೆ. ದೇವಾಲಯದ ಸೇವೆಗಳಿಗೆ, ದೀಪಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನೇ ಬಳಸಬೇಕು. ಜೊತೆಗೆ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಮಹತ್ವದ ಸೂಚನೆ ನೀಡಲಾಗಿದೆ.
ರಾಜ್ಯದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಆಂಧ್ರದ ತಿರುಮಲ ತಿರುಪತಿ ದೇವಾಲಯದಲ್ಲಿ ಲಡ್ಡುಗೆ ಪ್ರಾಣಿ ಕೊಬ್ಬು ಬಳಕೆಯ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕದ ಎಲ್ಲ ಪ್ರಮುಖ ದೇವಾಲಯಗಳಲ್ಲಿ ಪ್ರಸಾದ ಪರೀಕ್ಷಿಸಲು ರಾಜ್ಯ ಸರ್ಕಾರದ ನಿರ್ಧಾರ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ