/newsfirstlive-kannada/media/post_attachments/wp-content/uploads/2024/10/MYS-LIGHTINGS-1.jpg)
ಮೈಸೂರು ದಸರಾ.. ಅದನ್ನ ಬಣ್ಣಿಸಲು ಪದಗಳಿಗೂ ಬರ.. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಸ್ವರ್ಗವೇ ಧರೆಗಿಳಿದಂತೆ ಭಾಸವಾಗ್ತಿದೆ.. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಮೈಸೂರು, ಎತ್ತ ನೋಡಿದ್ರು ಝಗಮಗಿಸ್ತಿದೆ.. ಇವತ್ತು ಅರಮನೆಯಲ್ಲಿ ಸಂಭ್ರಮ ಕಳೆಗಟ್ಟಲಿದ್ದು, ಆಯುಧ ಪೂಜೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಇವತ್ತು ಶರನ್ನವರಾತ್ರಿಯ ಒಂಬತ್ತನೇ ದಿನ.. ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನಡೆಯಲಿದೆ.. ರಾಜ ಪರಂಪರೆಯಂತೆ ಬೆಳಗ್ಗೆ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯದುವೀರ್, ಪೂಜಾ ಕೈಂಕರ್ಯಗಳಲ್ಲಿ ತೊಡಗಿಕೊಳ್ಳಲಿದ್ದಾರೆ.
ಇದನ್ನೂ ಓದಿ:ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ.. ದಸರಾ ಮುಗಿದ ಬಳಿಕ 110 ಹಳ್ಳಿಗಳಿಗೆ ಹರಿಯಲಿದ್ದಾಳೆ ಕಾವೇರಿ
ಅರಮನೆಯಲ್ಲಿ ಆಯುಧ ಪೂಜೆ
- ಬೆಳಗ್ಗೆ 6 ಗಂಟೆಗೆ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾ ಹೋಮ
- ಹೋಮದ ಹೊತ್ತಿಗೆ ಆನೆ ಬಾಗಿಲಿಗೆ ಪಟ್ಟದ ಹಸು ಆಗಮನ
- ಬೆಳಗ್ಗೆ 6.40ರಿಂದ 7.10ರ ಸಮಯದಲ್ಲಿ ಆಯುಧಗಳ ಶುಚಿ
- ಅರಮನೆ ಕಲ್ಯಾಣ ಮಂಟಪದಿಂದ ಆನೆ ಬಾಗಿಲಿನ ಮೂಲಕ
- ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಯುಧಗಳ ರವಾನೆ
- ಆಯುಧಗಳನ್ನ ಸ್ವಚ್ಛಗೊಳಿಸಿ 7.30ರಿಂದ 8 ಗಂಟೆಕ್ಕೆ ವಾಪಸ್
- ಬೆಳಗ್ಗೆ 9.05ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ ಆಗಲಿದೆ
- 12.20-12.45, ಕಲ್ಯಾಣ ಮಂಟಪದಲ್ಲಿ ಆಯುಧಗಳಿಗೆ ಪೂಜೆ
- ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್ ಒಡೆಯರ್
- ಆನೆ ತೊಟ್ಟಿಯಲ್ಲಿ ಪಟ್ಟದ ಹಸು, ಕುದುರೆ, ಆನೆ, ಪಲ್ಲಕ್ಕಿ ಪೂಜೆ
- ರಾಜರು ಬಳಸುವ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಕೆ
- ನವರಾತ್ರಿಯ ಒಂಭತ್ತನೇ ದಿನದ ಆಯುಧ ಪೂಜೆ ಸಂಪನ್ನ
ನಾಡಹಬ್ಬದ ಮೆರಗು ಜಂಬೂಸವಾರಿಗೂ ಇವತ್ತೊಂದೇ ದಿನ ಬಾಕಿ. ನಾಳೆ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡ ಅಧಿದೇವತೆ ಚಾಮುಂಡಿ, ಭಕ್ತರಿಗೆ ದರ್ಶನ ಭಾಗ್ಯ ತೋರಲಿದ್ದಾಳೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರು ಸಿಂಗಾರದಿಂದ ನಳನಳಿಸ್ತಿದ್ದು, ದಶದಿನದ ಕ್ಷಣಗಳನ್ನ ಕಣ್ತುಂಬಿಕೊಳ್ಳಲು ಕಾತರದಿಂದ ಕಾಯ್ತಿದ್ದಾರೆ.
ಆಯುದ್ಧ ಪೂಜೆಯ ಮಹತ್ವ ಏನು..?
ಹಿಂದೂ ಧರ್ಮದಲ್ಲಿ ಆಯುಧ ಪೂಜೆಗೆ ವಿಶೇಷ ಮಹತ್ವವಿದೆ. ಪುರಾಣಗಳ ಪ್ರಕಾರ ಈ ದಿನ ಆಯುಧಗಳನ್ನು ಪೂಜಿಸುವ ಸಂಪ್ರದಾಯವಿದೆ. ಹಿಂದಿನ ಕಾಲದಲ್ಲಿ ಕ್ಷತ್ರಿಯ ಜನರು ಯುದ್ಧಕ್ಕೆಂದು ಹೋಗುತ್ತಿದ್ದರು. ಇವರು ವಿಜಯದಶಮಿಯ ಒಂದು ದಿನ ಮೊದಲು ಆಯುಧ ಪೂಜೆ ದಿನ ತಮ್ಮ ಯುದ್ಧ ಸಾಮಾಗ್ರಿಗಳನ್ನಿಟ್ಟು ಪೂಜೆಯನ್ನು ಮಾಡುತ್ತಿದ್ದರು. ಆಯುಧ ಪೂಜೆಯ ಮೂಲಕ ಆಯುಧಗಳನ್ನು ಪೂಜಿಸುವುದರಿಂದ ಯುದ್ಧದಲ್ಲಿ ವಿಜಯಿಯಾಗಬಹುದು ಎಂಬುದು ನಂಬಿಕೆಯಾಗಿತ್ತು. ಈ ಪೂಜೆಯನ್ನು ಕೆಲಸ ಮತ್ತು ಜ್ಞಾನದ ಸಮನ್ವಯದ ಸಂಕೇತವೆಂದು ಪರಿಗಣಿಸಲಾಗಿದೆ.
ಇದನ್ನೂ ಓದಿ:Dasara 2024: ದಸರಾ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ! ಈ ಬಾರಿಯ ಸ್ಪೆಷಲ್ ಏನು ಗೊತ್ತಾ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ