ಮದುವೆಗೆ ಖ್ಯಾತ ತಾರೆಯರು, ರಾಜಕೀಯ ಗಣ್ಯರು ಭಾಗಿ
ಕೊಡವ ಸಂಪ್ರದಾಯದಂತೆ ಹರ್ಷಿಕಾ, ಭುವನ್ ವಿವಾಹ
ಕೆಲವು ವರ್ಷದಿಂದ ಪ್ರೀತಿ ಮಾಡ್ತಿದ್ದ ಚಿತ್ರರಂಗದ ನಟ, ನಟಿ
ಸ್ಯಾಂಡಲ್ವುಡ್ನ ಕ್ಯೂಟ್ ಕ್ಯೂಟ್ ಜೋಡಿ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಅವರ ಅದ್ಧೂರಿ ಮದುವೆ ಸಮಾರಂಭ ಇಂದು 10:30ಕ್ಕೆ ನಡೆಯಲಿದೆ. ಕೊಡಗಿನ ವಿರಾಜಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ವಿವಾಹ ಮಹೋತ್ಸವವು ಸಡಗರದಿಂದ ನೆರವೇರಲಿದೆ.
ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ನವ ವಧು ಹರ್ಷಿಕಾ ಪೂಣಚ್ಚ ಮತ್ತು ವರ ಭುವನ್ ಪೊನ್ನಣ್ಣ ಅವರ ಮದುವೆ ಸಮಾರಂಭದಲ್ಲಿ ಸ್ಯಾಂಡಲ್ವುಡ್ನ ಖ್ಯಾತ ತಾರೆಯರು ಹಾಗೂ ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಈ ವೇಳೆ ನವ ವಧು ವರನಿಗೆ ಆಶೀರ್ವದಿಸಿ ಶುಭ ಹಾರೈಸಲಿದ್ದಾರೆ. ಇನ್ನು ಮದುವೆಯು ಪಕ್ಕಾ ಕೊಡವ ಸಂಪ್ರದಾಯದಂತೆ ನಡೆಯಲಿದ್ದು ನವ ಜೋಡಿಗಳು ಬೆಳಗ್ಗೆಯಿಂದಲೇ ಹೊಸ ಡ್ರೆಸ್ನಲ್ಲಿ ಕಂಗೊಳಿಸುತ್ತಿದ್ದಾರೆ. ರಾತ್ರಿಯಿಂದಲೇ ಎರಡು ಕುಟುಂಬದವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು ಸ್ನೇಹಿತರು, ಬಂಧುಗಳು ಹಾಗೂ ಆತ್ಮೀಯರನ್ನು ವಿವಾಹಕ್ಕೆ ಸ್ವಾಗತಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಮೊನ್ನೆ ಮೊನ್ನೆಯಷ್ಟೇ ಕೊಡಗಿನ ಇಗ್ಗುತ್ತಪ್ಪ ದೇವಾಲಯದಲ್ಲಿ ಹರ್ಷಿಕಾ ಮತ್ತು ಭುವನ್ ಲಗ್ನಪತ್ರಿಕೆ ಕಾರ್ಯ ನಡೆದಿತ್ತು. ಇದರಲ್ಲಿ ಎರಡು ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಕೊಡಗು ಭಾಷೆಯಲ್ಲೇ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿತ್ತು. ಕೊಡಗು ಸಂಪ್ರದಾಯದಂತೆ ಮದುವೆ ಆಗುತ್ತಿದ್ದು, ಮುಹೂರ್ತ ಕಾರ್ಯಗಳು ಬಹುತೇಕವಾಗಿ ಕೊಡಗಿನಲ್ಲಿ ನಡೆಯಲಿವೆ.
ಭುವನ್ ಮತ್ತು ಹರ್ಷಿಕಾ ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಆಗಾಗ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಇವತ್ತು ಬೆಳ್ಳಗ್ಗೆ ಶುಭ ಮೂಹರ್ತದಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಎರಡು ಕುಟುಂಬದ ಸದಸ್ಯರಲ್ಲಿ ಸಂತಸ ಮನೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ