ಮಕ್ಕಳೇ.. ಈ ಜಿಲ್ಲೆಯ ಶಾಲಾ-ಕಾಲೇಜಿಗಳಿಗೆ ಇಂದು ಮತ್ತು ನಾಳೆ ರಜೆ!

author-image
AS Harshith
Updated On
Karnataka Rain: ರಾಜ್ಯದಲ್ಲಿ ಮುಂದುವರಿದ ಮಳೆ.. ಇಂದು ಈ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ
Advertisment
  • ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
  • ಮಳೆಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ
  • ಕೊಡಗು, ಬೆಳಗಾವಿ, ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಕಾರವಾರ, ಅಂಕೋಲಾ, ಹೊನ್ನಾವರ, ಕುಮಟಾ, ಭಟ್ಕಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಇಂದು ಮತ್ತು ನಾಳೆ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

publive-image

ಕೊಡಗಿನಲ್ಲೂ ಭಾರೀ ಮಳೆ ಹಿನ್ನಲೆ ಪೊನ್ನಂಪೇಟೆ ತಾಲೂಕಿನ ಕುಟ್ಟ ಮತ್ತು ಟಿ. ಶೆಟ್ಟಿಗೇರಿ ಕ್ಲಸ್ಟರ್‌ನ 40 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇನ್ನು ಧಾರವಾಡದಲ್ಲಿ ನಿರಂತರ ಮಳೆ ಹಿನ್ನೆಲೆ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment