RCB vs PBKS: ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮೊದಲೇ ಶಾಕಿಂಗ್ ನ್ಯೂಸ್..!

author-image
Veena Gangani
Updated On
RCB vs PBKS: ಪಂಜಾಬ್ ವಿರುದ್ಧದ ಪಂದ್ಯಕ್ಕೂ ಮೊದಲೇ ಶಾಕಿಂಗ್ ನ್ಯೂಸ್..!
Advertisment
  • ತವರಿನಲ್ಲಿ ಗೆಲುವಿನ ಪತಾಕೆ ಹಾರಿಸುತ್ತಾ RCB?
  • ಮೊದಲ ಗೆಲುವಿನ ನಿರೀಕ್ಷೆಯಲ್ಲಿ RCB ಫ್ಯಾನ್ಸ್
  • ಸತತವಾಗಿ 2 ಪಂದ್ಯಗಳನ್ನು ಸೋತಿರುವ ಆರ್​ಸಿಬಿ

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 18ನೇ ಆವೃತ್ತಿಯ 34ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ (RCB vs PBKS) ಮಧ್ಯೆ ನಡೆಯಲಿದೆ. ಸತತವಾಗಿ ಎರಡು ಪಂದ್ಯಗಳನ್ನು ಸೋತಿರುವ ಆರ್​ಸಿಬಿ ಇಂದು ಗೆಲುವು ಸಾಧಿಸುತ್ತಾ ಅಂತ ಕಾದು ನೋಡಬೇಕಿದೆ. ಆದರೆ ಹವಾಮಾನ ಇಲಾಖೆ ಶಾಕಿಂಗ್ ನ್ಯೂಸ್ ನೀಡಿದೆ.

ಇದನ್ನೂ ಓದಿ: ಆರ್​ಸಿಬಿಗೆ ಯಾರೇ ಬರಲಿ, ಯಾರೇ ಹೋಗಲಿ.. ಕೊಹ್ಲಿಯ ಈ ದೊಡ್ಡ ಗುಣದ ಬಗ್ಗೆ ಗೊತ್ತಿರಲಿ..

publive-image

ಆದ್ರೆ ಇಂದು ಚಿನ್ನಸ್ವಾಮಿ ಸ್ಟೇಡಿಯಂ ನಡೆಯುತ್ತಿರೋ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್​ಗೆ ವರುಣ ಅಡ್ಡಿಯಾಗುವ ಸಾಧ್ಯತೆ ಇದೆ. ಇಂದು ಸಂಜೆ 7.30ಕ್ಕೆ ನಡೆಯಲಿರುವ ಪಂದ್ಯಕ್ಕೆ ಮಳೆ ಬರುವ ಸಾಧ್ಯತೆ ಇದೆ. ಕಳೆದ ಎರಡು ದಿನದಿಂದ ಬೆಂಗಳೂರಲ್ಲಿ ಸಂಜೆ ವೇಳೆ ಮಳೆ ಸುರಿಯುತ್ತಿದೆ.

publive-image

ಅಲ್ಲದೇ ಇಂದು ಸಿಲಿಕಾನ್ ಸಿಟಿಯಲ್ಲಿ ಸಂಜೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಸ್ವಲ್ಪ ಪ್ರಮಾಣದಲ್ಲಿ ಮಳೆ ಬಂದೂ ಮ್ಯಾಚ್​ ಸ್ಟಾಪ್ ಆಗುವ ಸಾಧ್ಯತೆ ಇದೆ. ಹೀಗಾಗಿ ಆರ್​ಸಿಬಿ ಅಭಿಮಾನಿಗಳು ಮಳೆ ಬಾರದಿರಲಿ ಅಂತ ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment