ಇವತ್ತು ಮತ್ತು ನಾಳೆ ನಡೆಯಲಿರುವ ಕಾಂಗ್ರೆಸ್ ಸಭೆ
ಒಟ್ಟು 39 CWC ಸದಸ್ಯರು ಭಾಗಿಯಾಗಲಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗಿ ಆಗಲಿದ್ದಾರೆ
ಹೈದರಾಬಾದ್ನಲ್ಲಿ ಇವತ್ತು ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ.
ಹೈದರಾಬಾದ್ನಲ್ಲಿ ಎರಡು ದಿನಗಳ ಕಾಲ ನಡೆಯಲಿರೋ ಸಭೆಯಲ್ಲಿ ಪಕ್ಷದ ವರಿಷ್ಠರು ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಲೋಕಸಭೆ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
‘ಭಾರತ್ ಜೋಡೋ ಯಾತ್ರೆ’ 2.0 ಆರಂಭದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಭೆಯಲ್ಲಿ ಒಟ್ಟು 39 CWC ಸದಸ್ಯರು ಭಾಗಿಯಾಗಲಿದ್ದಾರೆ. ಜೊತೆಗೆ ಕಾಂಗ್ರೆಸ್ ಎಲ್ಲಾ ರಾಜ್ಯದ ಅಧ್ಯಕ್ಷರು ಮತ್ತು ಸಿಎಲ್ಪಿ ನಾಯಕರು ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ.
ಸಿದ್ದರಾಮಯ್ಯ ಕೂಡ ಸಭೆಯಲ್ಲಿ ಭಾಗಿ..!
ಹೈದರಾಬಾದ್ನಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗಿಯಾಗುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಗಳು ಹೊರಡಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಹೈದರಾಬಾದ್ನಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಹೈದರಾಬಾದ್ನ ಬೇಗಂಪೇಟ್ ವಿಮಾನ ನಿಲ್ದಾಣದ ಮೂಲಕ ಕಲಬುರಗಿಗೆ ಪ್ರಯಾಣ ಮಾಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ