newsfirstkannada.com

ಕಾವೇರಿ, ಮಹದಾಯಿ ಸೇರಿ ರಾಜ್ಯದ ಜಲವಿವಾದಗಳ ಬಗ್ಗೆ ಚರ್ಚೆ; ಸರ್ವಪಕ್ಷಗಳ ಸಭೆ ಕರೆದ ಸರ್ಕಾರ 

Share :

23-08-2023

    ಇಂದು ಸರ್ವಪಕ್ಷ ಸಭೆ ನಡೆಸಲಿರುವ ರಾಜ್ಯ ಸರ್ಕಾರ

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ

    BSY ಹಾಗೂ H.D. ಕುಮಾರಸ್ವಾಮಿಗೆ ಸರ್ಕಾರ ಆಹ್ವಾನ

ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿದೆ. ಜಲಾಶಯಗಳ ಒಡಲು ಖಾಲಿಯಾಗಿದೆ. ಈ ಸಂಕಷ್ಟದ ಸಮಯದಲ್ಲೂ ತಮಿಳುನಾಡಿಗೆ ಕಾವೇರಿ ಹರಿದು ಹೋಗ್ತಿದ್ದಾಳೆ. ಹೀಗಾಗಿ ದಿನದಿಂದ ದಿನ ಕಾವೇರಿ ಭಾಗದಲ್ಲಿ ಸರ್ಕಾರದ ವಿರುದ್ಧ ರೈತರು, ವಿಪಕ್ಷಗಳ ಆಕ್ರೋಶ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕಾವೇರಿ ಸಮಸ್ಯೆಗೆ ಪರಿಹಾರ ಹುಡುಕಲು ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ.

ಕರ್ನಾಟಕದಲ್ಲಿ ತಾರಕಕ್ಕೇರಿದ ಕಾವೇರಿ ಕೋಲಾಹಲ!

ಸದ್ಯ ಜಲಾಶಯಗಳಲ್ಲಿ ನೀರು ಇಲ್ಲದಿದ್ರೂ ತಮಿಳುನಾಡಿಗೆ ನೀರು ಹರಿಸುವ ಮೂಲಕ ಸರ್ಕಾರ ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮತ್ತೊಂದೆಡೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಕಾವೇರಿ, ಮಹದಾಯಿ ಸೇರಿ ರಾಜ್ಯದ ಜಲವಿವಾದಗಳ ಬಗ್ಗೆ ಚರ್ಚೆ ನಡೆಸಲಿದೆ.

ಮಾಜಿ ಸಿಎಂಗಳಾದ ಬಿಎಸ್​ವೈ, ಹೆಚ್​​ಡಿಕೆಗೆ ಆಹ್ವಾನ!

ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಹೆಚ್​.ಡಿ.ಕುಮಾರಸ್ವಾಮಿಗೆ ಸರ್ಕಾರ ಆಹ್ವಾನ ನೀಡಿದೆ. ಇನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೂ ಆಹ್ವಾನ ನೀಡಲಾಗಿದ್ದು ಅನಾರೋಗ್ಯದ ಕಾರಣ ಭಾಗಿಯಾಗುವುದು ಅನುಮಾನ ಎನ್ನಲಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ, ರಾಜ್ಯದ ನಿಲುವು ಏನಾಗಿರಬೇಕು ಎಂಬ ಬಗ್ಗೆ ವಿಪಕ್ಷಗಳಿಂದ ಸಲಹೆ ಪಡೆದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.
ಇನ್ನು ಈ ಬಗ್ಗೆ ಟ್ವೀಟ್​​ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದಿನ ಸರ್ವ ಪಕ್ಷಗಳ ಸಭೆಗೆ ರಾಜ್ಯದ ಎಲ್ಲಾ ಪಕ್ಷಗಳ ಮುಖಂಡರು ಭಾಗಿಯಾಗಿ ನಾಡಿನ ಹಿತರಕ್ಷಣೆಗೆ ನಮ್ಮೊಂದಿಗೆ ಕೈಜೋಡಿಸುತ್ತೀರೆಂಬ ಭರವಸೆಯಿದೆ ಅಂತಾ ತಿಳಿಸಿದ್ದಾರೆ.

ಕಾವೇರಿ ಹಾಗೂ ಮಹದಾಯಿ ಜಲ ವಿವಾದಗಳ ಬಗ್ಗೆ ಚರ್ಚಿಸಿ ಪರಿಹಾರ ಸೂತ್ರಗಳನ್ನು ಕಂಡುಕೊಳ್ಳಲು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದೇವೆ. ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಕೃಷಿ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕೆ ಅಗತ್ಯವಾದ ಪ್ರಮಾಣಕ್ಕಿಂತ ಕಡಿಮೆ ನೀರಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೂಡ ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳ ಆದೇಶ ಪಾಲನೆ ಮಾಡಬೇಕಾಗಿದೆ. ಒಂದೆಡೆ ಕನ್ನಡಿಗರ ಹಿತರಕ್ಷಣೆ, ಇನ್ನೊಂದೆಡೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕಾದ ಸಂದಿಗ್ಧ ಸಮಯದಲ್ಲಿ ನಾವಿರುವುದರಿಂದ ಇಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಎಲ್ಲಾ ಪಕ್ಷಗಳ ಮುಖಂಡರು, ಸಂಸತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ರಚನಾತ್ಮಕ ಸಲಹೆ, ಸಹಕಾರ ನೀಡುವ ಮೂಲಕ ನಾಡಿನ ಹಿತರಕ್ಷಣೆಗೆ ನಮ್ಮೊಂದಿಗೆ ಕೈಜೋಡಿಸುತ್ತೀರೆಂಬ ಭರವಸೆಯಿದೆ

ಜಸ್ಟೀಸ್ ಬಿ.ಆರ್.ಗವಾಯಿ ನೇತೃತ್ವದಲ್ಲಿ ತ್ರಿಸದಸ್ಯ ಪೀಠ ರಚನೆ

ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ಕಾವೇರಿಗಾಗಿ ಕಾನೂನು ಸಮರ ಶುರುವಾಗಲಿದೆ.

ಕಾವೇರಿ ವಿವಾದದ ಎಲ್ಲ ಅರ್ಜಿ ವಿಚಾರಣೆ ನಡೆಸಲಿರುವ ಪೀಠ

ಕರ್ನಾಟಕ, ತಮಿಳುನಾಡು ಸಲ್ಲಿಸಿರುವ ಕಾವೇರಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂಕೋರ್ಟ್​ ಹೊಸ ಪೀಠ ರಚನೆ ಮಾಡಿದೆ. ಜಸ್ಟೀಸ್ ಬಿ.ಆರ್.ಗವಾಯಿ ನೇತೃತ್ವದಲ್ಲಿ ತ್ರಿಸದಸ್ಯ ಪೀಠವನ್ನು ರಚನೆ ಮಾಡಿದೆ. ಇದೇ ಶುಕ್ರವಾರ ಹೊಸ ಪೀಠದಲ್ಲಿ ವಿವಾದದ ವಿಚಾರಣೆ ನಡೆಯಲಿದೆ.

ಒಟ್ಟಾರೆ.. ಇಂದು ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕಾವೇರಿ ಸಂಕಷ್ಟ ಸೂತ್ರ ಹಾಗೂ ರಾಜ್ಯದ ಹಿತರಕ್ಷಣೆ ಕುರಿತು ಏನೆಲ್ಲಾ ಮಾಡಬೇಕು ಅನ್ನೋ ಬಗ್ಗೆ ಚರ್ಚೆ ನಡೆಯಲಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ರಾಜ್ಯದ ನಿಲುವಿನ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಾವೇರಿ, ಮಹದಾಯಿ ಸೇರಿ ರಾಜ್ಯದ ಜಲವಿವಾದಗಳ ಬಗ್ಗೆ ಚರ್ಚೆ; ಸರ್ವಪಕ್ಷಗಳ ಸಭೆ ಕರೆದ ಸರ್ಕಾರ 

https://newsfirstlive.com/wp-content/uploads/2023/07/Siddaramaiah-10.webp

Load More