Advertisment

ಹವಾಮಾನ ಇಲಾಖೆಯಿಂದ RCB ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್​.. ಆತಂಕ ಶುರು

author-image
Ganesh
Updated On
ಹವಾಮಾನ ಇಲಾಖೆಯಿಂದ RCB ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್​.. ಆತಂಕ ಶುರು
Advertisment
  • ಇವತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಪಂದ್ಯ
  • ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಫ್ಯಾನ್ಸ್ ಕಾತರ
  • ಪ್ಲೇ-ಆಫ್​​ಗೆ ಹೋಗಬೇಕು ಎಂದರೆ ಆರ್​ಸಿಬಿ ಗೆಲ್ಲಲೇಬೇಕು

ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇವತ್ತು ಆರ್​ಸಿಬಿ ಹಾಗೂ ಗುಜರಾತ್ ತಂಡಗಳ ನಡುವೆ ಹೈ-ವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

Advertisment

ಈ ನಡುವೆ ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆ, ಆರ್​ಸಿಬಿ ಅಭಿಮಾನಿಗಳಿಗೆ ಆತಂಕವನ್ನುಂಟು ಮಾಡಿದೆ. ನಿನ್ನೆ ಮಧ್ಯಾಹ್ನ ಸುರಿದಂತೆ ಇವತ್ತೂ ಕೂಡ ಬೆಂಗಳೂರಲ್ಲಿ ಮಳೆ ಬರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಪಂದ್ಯ ನಡೆಯುವ ಸಮಯದಲ್ಲಿ ಮಳೆರಾಯ ಕಾಟ ಕೊಟ್ಟರೆ, ಪಂದ್ಯ ರದ್ದಾದರೂ ಅಚ್ಚರಿ ಇಲ್ಲ. ಹೀಗಾಗಿ ಇವತ್ತು ಒಂದು ದಿನ ಬೇಡ, ನಾಳೆ ಬಂದು ಬಿಡು ಎಂದು ಆರ್​ಸಿಬಿ ಅಭಿಮಾನಿಗಳು ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಮೊದಲ ಮಳೆ ಮಾಡಿದ ಅನಾಹುತ.. ನೆಲ ಕಚ್ಚಿದ ಟೊಮ್ಯಾಟೋ ಬೆಳೆ.. ರಾಜ್ಯದಲ್ಲಿ ಎಲ್ಲಿ ಏನಾಯ್ತು..?

ಆರ್​ಸಿಬಿ ಪ್ಲೇ-ಆಫ್​ಗೆ ಪ್ರವೇಶ ಮಾಡಬೇಕು ಎಂದರೆ ಇವತ್ತಿನ ಗೆಲುವು ಅನಿವಾರ್ಯ. ಅದಕ್ಕೆ ಮಳೆ ಕೂಡ ಸಹಕಾರ ನೀಡಬೇಕಿದೆ. ಹೀಗಾಗಿ ಇವತ್ತು ಯಾವುದೇ ಕಾರಣಕ್ಕೂ ಬೀಳಬಾರದು ಎಂದು ಬೇಡಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಗುಜರಾತ್ ತಂಡವನ್ನು ಆರ್​ಸಿಬಿ ಎದುರಿಸಿತ್ತು. ಗುಜರಾತ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಆರ್​ಸಿಬಿ ಇವತ್ತು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

Advertisment

10 ಪಂದ್ಯವನ್ನು ಆಡಿರುವ ಆರ್​ಸಿಬಿ ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇತ್ತ ಗುಜರಾತ್ 4 ಪಂದ್ಯಗಳನ್ನು ಗೆದ್ದುಕೊಂಡು ಪ್ಲೇ-ಆಫ್ ಲೆಕ್ಕಾಚಾರದಲ್ಲಿದೆ. ಎರಡೂ ತಂಡಗಳಿಗೂ ಗೆಲುವು ಅನಿವಾರ್ಯ ಹಿನ್ನೆಲೆಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡೋದು ದಟ್ಟವಾಗಿದೆ.

ಇದನ್ನೂ ಓದಿ:ಆರ್​ಸಿಬಿಗೆ ಇವತ್ತು ಬಿಗ್​ ಡೇ.. ಪ್ಲೇಯಿಂಗ್-11ನಲ್ಲಿ ಆಗುತ್ತಾ ಭಾರೀ ಬದಲಾವಣೆ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment