/newsfirstlive-kannada/media/post_attachments/wp-content/uploads/2025/04/RCB-vs-DC.jpg)
ಬೆಂಗಳೂರಿನಲ್ಲಿ ಇವತ್ತು ಐಪಿಎಲ್ ಪಂದ್ಯ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಟ ನಡೆಸಲಿವೆ.‘
ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಸಂಜೆ 7.30 ರಿಂದ ಪಂದ್ಯ ಆರಂಭವಾಗಲಿದ್ದು, ಆರ್​ಸಿಬಿ ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ. ಆರ್​ಸಿಬಿಗೆ ಇದು ಐದನೇ ಪಂದ್ಯವಾಗಿದೆ. ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವ ಬೆಂಗಳೂರು, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಕಿಂಗ್ ಕೊಹ್ಲಿ, ಸೂರ್ಯ ಅಲ್ಲವೇ ಅಲ್ಲ.. 2025ರ ಆರೆಂಜ್ ಕ್ಯಾಪ್ ಪಡೆದ ಸ್ಟಾರ್ ಬ್ಯಾಟರ್ ಯಾರು?
ಇನ್ನು, ಡೆಲ್ಲಿ ಕ್ಯಾಪಿಟಲ್ಸ್​ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿದೆ. ಆಡಿರುವ ಮೂರೂ ಪಂದ್ಯಗಳನ್ನು ಗೆದ್ದುಕೊಂಡಿದ್ದು, 6 ಪಾಯಿಂಟ್ಸ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಕದನ ತುಂಬಾನೇ ಹೈ-ವೋಲ್ಟೇಜ್ ಆಗಿರಲಿದೆ.
ಆರ್​ಸಿಬಿ ತಂಡದಲ್ಲಿ ಬದಲಾವಣೆ..?
ಇವತ್ತಿನ ಪ್ಲೇಯಿಂಗ್​-11ನಲ್ಲಿ ಆರ್​ಸಿಬಿ ಸಣ್ಣ ಬದಲಾವಣೆ ಮಾಡಿಕೊಂಡರೂ ಅಚ್ಚರಿ ಇಲ್ಲ. ಯಾಕೆಂದರೆ ಕಳೆದ ಬಾರಿ ತವರಿನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಆರ್​ಸಿಬಿ ಸೋಲನ್ನು ಕಂಡಿದೆ. ಹೀಗಾಗಿ ವೇಗಿಗಳ ಬದಲಾಗಿ ಸ್ಪಿನ್ನರ್ಸ್​ಗೆ ಹೆಚ್ಚು ಆಧ್ಯತೆ ನೀಡುವ ಸಾಧ್ಯತೆ ಇದೆ. ಯಾಕೆಂದರೆ ಬೆಂಗಳೂರಿನ ಈ ಮೈದಾನ ಸ್ಪಿನ್ನರ್ಸ್ ಸ್ನೇಹಿ ಆಗಿದೆ. ಬ್ಯಾಟಿಂಗ್​ಗೂ ಅನುಕೂಲಕರವಾಗಿದೆ.
ಪ್ಲೇಯಿಂಗ್ -11..!
ಸಾಧ್ಯತೆ: ಫಿಲ್ ಸಾಲ್ಟ್​, ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ರಜತ್ ಪಾಟೀದಾರ್ (ಕ್ಯಾಪ್ಟನ್), ಲಿಯಾಮ್ ಲಿವಿಂಗ್​​ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೆವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಸ್ ಹೇಜಲ್​ವುಡ್. ಹಾಗೂ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸುಯೇಶ್ ಶರ್ಮಾ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೆಲ್ಲುವ ಫೇವರಿಟ್ ತಂಡ ಯಾವುದು.. ಆರ್​​ಸಿಬಿನಾ, ಡೆಲ್ಲಿನಾ?
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us