SRH V/S MI ನಡುವೆ ಜಿದ್ದಾಜಿದ್ದಿ; ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ಅಬ್ಬರಿಸೋದ್ಯಾರು?

author-image
Veena Gangani
Updated On
SRH V/S MI ನಡುವೆ ಜಿದ್ದಾಜಿದ್ದಿ; ರಾಜೀವ್​ ಗಾಂಧಿ ಸ್ಟೇಡಿಯಂನಲ್ಲಿ ಅಬ್ಬರಿಸೋದ್ಯಾರು?
Advertisment
  • ಆರಂಭಿಕ ಪಂದ್ಯದಲ್ಲಿ ಮುಗ್ಗರಿಸಿದ್ದ ಸನ್‌ರೈಸರ್ಸ್ ಹೈದರಾಬಾದ್
  • IPL ಮೊದಲ ಪಂದ್ಯದಲ್ಲಿ ಸೋಲುಂಡಿವೆ ಈ ಎರಡು ತಂಡಗಳು
  • ಪಾಯಿಂಟ್​ ಟೇಬಲ್​​ನಲ್ಲಿ ಅಗ್ರಸ್ಥಾನಕ್ಕೆ ಏರಿರುವ ಸಿಎಸ್​​ಕೆ

ಐಪಿಎಲ್​ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ V/S ಮುಂಬೈ ತಂಡಗಳು ಮುಖಾಮುಖಿಯಾಗಲಿವೆ. ಎರಡೂ ತಂಡಗಳು ಇಂದು ಸಂಜೆ 7:30ಕ್ಕೆ ಹೈದರಾಬಾದ್​ನ ರಾಜೀವ್​ ಗಾಂಧಿ ಸ್ಟೇಡಿಂನಲ್ಲಿ ಸೆಣೆಸಾಟ ನಡೆಸಲಿವೆ.

ಇದನ್ನೂ ಓದಿ:ಕನ್ನಡಿಗ ರಚಿನ್​ ಕಮಾಲ್​​; ಗುಜರಾತ್​​ ವಿರುದ್ಧ ಗೆದ್ದು ಬೀಗಿದ ಚೆನ್ನೈ ಸೂಪರ್​ ಕಿಂಗ್ಸ್​​​..!

ಪ್ರಸಕ್ತ ಆವೃತ್ತಿಯ ಐಪಿಎಲ್‌ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಸೋಲು ಕಂಡ ಎರಡು ತಂಡಗಳು, ಇದೀಗ ಟೂರ್ನಿಯಲ್ಲಿ ಮೊದಲನೇ ಗೆಲುವಿಗಾಗಿ ಜಿದ್ದಾಜಿದ್ದಿ ನಡೆಸಲಿವೆ. ಕಳೆದ ಮಾರ್ಚ್ 23ರಂದು ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಸೋಲಿನ ಅಭಿಯಾನ ಆರಂಭಿಸಿತು.

publive-image

ಅತ್ತ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಕೂಡ ಗುಜರಾತ್ ಟೈಟಾನ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಮುಗ್ಗರಿಸಿತು. ಇದೀಗ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಎರಡೂ ತಂಡಗಳು ಗೆಲುವಿನ ತಯಾರಿಯಲ್ಲಿವೆ. ಈ ಎರಡು ತಂಡಗಳಲ್ಲಿ ಯಾವ ಟೀಮ್​ ಗೆದ್ದು ಬೀಗಲಿದೆ ಎಂದು ಕಾದು ನೋಡಬೇಕಿದೆ.

ಇನ್ನು ಪಾಯಿಂಟ್ಸ್​ ಟೇಬಲ್​​ನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದು ಮೊದಲ ಪಂದ್ಯದಲ್ಲಿದೆ. ರಾಜಸ್ಥಾನ್ ರಾಯಲ್ಸ್, ಕೆಕೆಆರ್​ ಕ್ರಮವಾಗಿ ಎರಡು, ಮೂರನೇ ಸ್ಥಾನದಲ್ಲಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment