Advertisment

CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾರ್ಥಿಗಳಿಗೆ ಡ್ರೆಸ್​ಕೋಡ್, ಮಾರ್ಗಸೂಚಿ..!

author-image
Ganesh
Updated On
CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾರ್ಥಿಗಳಿಗೆ ಡ್ರೆಸ್​ಕೋಡ್, ಮಾರ್ಗಸೂಚಿ..!
Advertisment
  • ಹೊರನಾಡು ಕನ್ನಡಿಗರಿಗೆ ಯಾವಾಗ ನಡೆಯುತ್ತೆ ಪರೀಕ್ಷೆ?
  • ಪರೀಕ್ಷಾ ಪ್ರಾಧಿಕಾರದಿಂದ ಅಕ್ರಮ ನಡೆಯದಂತೆ ಸಕಲ ಸಿದ್ಧತೆ
  • ಸಿಇಟಿ ಕರ್ತವ್ಯಕ್ಕೆ 20,300 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ

ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯಾದ್ಯಂತ ಸಿಇಟಿ-2024 ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿದೆ. ಪರೀಕ್ಷಾ ಅಕ್ರಮ ತಡೆಯಲೂ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ.

Advertisment

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿದರೆ ಮಾತ್ರ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ:ಅದೃಷ್ಟ ಗಟ್ಟಿ ಇತ್ತು, ಜೀವ ಉಳಿಸಿಕೊಂಡ ಬೈಕ್ ಸವಾರ; ವಿಡಿಯೋ ನೋಡಿದ್ರೆ ಮೈ ಝಮ್ ಎನ್ನುತ್ತೆ..!

ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ಬಿಗಿಭದ್ರತೆ ಒದಗಿಸಲಾಗಿದೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಭಾಗಿಯಾಗುತ್ತಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಹಾಜರು ಆಗಲಿದ್ದಾರೆ.

Advertisment

ಇದನ್ನೂ ಓದಿ:ಟಿ20 ವಿಶ್ವಕಪ್​ಗೆ 20 ಆಟಗಾರರ ಹೆಸರು ಬಹಿರಂಗ; IPLನಲ್ಲಿ ಫೇಲ್​​​​ ಆದವರ ಹೆಸರೂ ಇದೆ..!

ಇವತ್ತು ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಏಪ್ರಿಲ್ 20 ರಂದು ಹೊರನಾಡು ಕನ್ನಡಿಗರಿಗೆ ಪರೀಕ್ಷೆ ನಡೆಯಲಿದೆ. ಇದೇ 20 ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾರ್ಥಿಗಳಿಗೆ ಸೂಚನೆಗಳು

  • ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ
  • ನೀಲಿ ಅಥವಾ ಕಪ್ಪು ಬಣ್ಣದ ಪೆನ್‌ ಮಾತ್ರ ಬಳಸತಕ್ಕದ್ದು
  • ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ
  • ಮೊಬೈಲ್‌, ಬ್ಲೂಟೂತ್‌, ಟ್ಯಾಬ್ಲೆಟ್‌, ಕೈಗಡಿಯಾರ, ಕ್ಯಾಲುಕುಲೇಟರ್‌, ನೋಟ್ ಪ್ಯಾಡ್‌, ಐ-ಪಾಡ್‌, ಇಯರ್‌ ಫೋನ್‌ ಇತ್ಯಾದಿಗಳನ್ನು ತರುವಂತಿಲ್ಲ
  • ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ
  • ಓಎಂಆರ್‌ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್‌ ಕೋಡ್‌ ನಮೂದಿಸುವುದು ಕಡ್ಡಾಯ
  • ಓಎಂಆರ್‌ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಹಾಕಬೇಕು
  • ಓಎಂಆರ್‌ ಶೀಟ್‌ನಲ್ಲಿರುವ ಟೈಮಿಂಗ್‌ ಮಾರ್ಕ್‌ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡುವಂತಿಲ್ಲ
Advertisment

ಇದನ್ನೂ ಓದಿರೋಹಿತ್ ಜೊತೆ ಬಿಸಿಸಿಐ ಹೈ-ವೋಲ್ಟೇಜ್ ಮೀಟಿಂಗ್; ಪಾಂಡ್ಯಗೆ ಶಾಕಿಂಗ್ ನ್ಯೂಸ್​ ಕೊಟ್ಟ ಆಯ್ಕೆ ಸಮಿತಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment