/newsfirstlive-kannada/media/post_attachments/wp-content/uploads/2024/07/KABINI_DAM_2.jpg)
ಮಂಡ್ಯ/ಮೈಸೂರು: ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಆದರೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣರಾಯನ ಆರ್ಭಟ ಕೊಂಚ ತಗ್ಗಿದೆ. ಇದರಿಂದ ಕೆಆರ್‌ಎಸ್ ಡ್ಯಾಂನ ಒಳಹರಿವು ಮತ್ತಷ್ಟು ಇಳಿಕೆಯಾಗಿದೆ. ಮತ್ತೊಂದು ಕಡೆ ಮೈಸೂರಿನ ಕಬಿನಿ ಜಲಾಶಯ ಭರ್ತಿಗೆ ಕೇವಲ ಮೂರೇ 3 ಅಡಿ ಮಾತ್ರ ಬಾಕಿ ಉಳಿದಿದೆ.
ಇದನ್ನೂ ಓದಿ: ಚಾರ್ಮಾಡಿ ಘಾಟ್ನಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತಗಳು.. ಕಾಫಿನಾಡಿನತ್ತ ಪ್ರವಾಸಿಗರ ಪಯಾಣ
ಕೆಆರ್‌ಎಸ್ ಡ್ಯಾಂನ ಒಳಹರಿವು ಇಳಿಕೆಯಾಗಿದ್ದು ನಿನ್ನೆ 9,686 ಕ್ಯೂಸೆಕ್ ಇದ್ದ ಒಳ ಹರಿವು ಇಂದು 6,185 ಕ್ಯೂಸೆಕ್ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 100.90 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ 23.523 ಟಿಎಂಸಿ ನೀರು ಸಂಗ್ರಹವಾಗಿದೆ. ಕುಡಿಯುವ ನೀರಿಗಾಗಿ 544 ಕ್ಯೂಸೆಕ್ ನೀರನ್ನ ಡ್ಯಾಂನಿಂದ ಹೊರಕ್ಕೆ ಬಿಡಲಾಗಿದೆ.
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ
- ಗರಿಷ್ಠ ಮಟ್ಟ- 124.80 ಅಡಿ
- ಇಂದಿನ ಮಟ್ಟ- 100.90 ಅಡಿ
- ಗರಿಷ್ಠ ಸಾಂದ್ರತೆ- 49.452 ಟಿಎಂಸಿ
- ಇಂದಿನ ಸಾಂದ್ರತೆ- 23.523 ಟಿಎಂಸಿ
- ಒಳ ಹರಿವು- 6,185 ಕ್ಯೂಸೆಕ್
- ಹೊರ ಹರಿವು- 544 ಕ್ಯೂಸೆಕ್
ಇದನ್ನೂ ಓದಿ: ಕೆಲವ್ರಿಗೆ ನನ್ನ ನೆನಪಿಸಿಕೊಳ್ಳದಿದ್ರೆ ನಿದ್ದೆಯೂ ಬರಲ್ಲ, ತಲೆಯೂ ಓಡಲ್ಲ -ಕುಮಾರಸ್ವಾಮಿ-ಡಿಕೆಶಿ ಮಧ್ಯೆ ವಾಗ್ಯುದ್ಧ ಹೆಂಗಿದೆ ಗೊತ್ತಾ?
ಕೆಆರ್‌ಎಸ್ ಜಲಾಶಯದಲ್ಲಿ ನೀರಿನಮಟ್ಟ ಇಳಿಕೆ ಕಂಡ್ರೆ, ಮೈಸೂರಿನ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮ ಬಳಿಯ ಕಬಿನಿ ಡ್ಯಾಂ ಇನ್ನೇನು ಭರ್ತಿಯಾಗಲು ಕೇವಲ 3 ಅಡಿಗಳು ಮಾತ್ರ ಬಾಕಿ ಇದೆ. ಈ ವರ್ಷ ಇಡೀ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಕಬಿನಿಯಾಗಲಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವಿನಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಶೀರ್ಘದಲ್ಲೇ ಕಬಿನಿ ಮೈದುಂಬಲಿದ್ದಾಳೆ.
ಇಂದಿನ ಕಬಿನಿ ಜಲಾಶಯದ ನೀರಿನ ಮಟ್ಟ
- ಗರಿಷ್ಠ ಮಟ್ಟ: 2,284 ಅಡಿ
- ಇಂದಿನ ಮಟ್ಟ: 2,281 ಅಡಿ
- ಒಳಹರಿವು: 5,509 ಕ್ಯೂಸೆಕ್
- ಹೊರಹರಿವು: 4,000 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ