newsfirstkannada.com

ಇಂದು ಕೋರ್ಟ್​ ಕಟಕಟೆಯಲ್ಲಿ ಸಿಎಂ ಸಿದ್ದರಾಮಯ್ಯ.. ಡಿಕೆ ಶಿವಕುಮಾರ್; ಯಾವ ವಿಚಾರ..?

Share :

Published June 1, 2024 at 10:11am

  ಬೆಳಗ್ಗೆ 10.45ಕ್ಕೆ ಇಬ್ಬರು ನಾಯಕರು ಹಾಜರಾಗಲಿದ್ದಾರೆ

  ಸಿ.ಟಿ ಸಿವಿಲ್ ಕೋರ್ಟ್​ನ ನ್ಯಾಯಾಧೀಶರ ಮುಂದೆ ಉತ್ತರ

  ಬಿಜೆಪಿ ಪ್ರಧಾನಕಾರ್ಯದರ್ಶಿ ಕೇಶವಪ್ರಸಾದ್ ದೂರು ಸಲ್ಲಿಕೆ

ಬೆಂಗಳೂರು: ಬಿಜೆಪಿ ವಿರುದ್ಧ ಗಂಭೀರ ಆರೋಪ ಪ್ರಕರಣದಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೋರ್ಟ್​ಗೆ ಹಾಜರಾಗಲಿದ್ದಾರೆ.

ಸಿ.ಟಿ ಸಿವಿಲ್ ಕೋರ್ಟ್​ನ ನ್ಯಾಯಾಧೀಶರ ಮುಂದೆ ಬೆಳಗ್ಗೆ 10.45ಕ್ಕೆ ಇಬ್ಬರು ನಾಯಕರು ಹಾಜರಾಗಲಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾಹೀರಾತು ಮೂಲಕ ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಸಿಎಂ ಹುದ್ದೆಗಾಗಿ 2500 ಕೋಟಿ, ಮಂತ್ರಿ ಸ್ಥಾನಕ್ಕಾಗಿ 500 ಕೋಟಿ ರೂಪಾಯಿ ಹಣವನ್ನು ಬಿಜೆಪಿ ಹೈಕಮಾಂಡ್​ಗೆ ನೀಡಿ ರಾಜ್ಯ ಬಿಜೆಪಿ ನಾಯಕರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಕೋವಿಡ್ ಕಿಟ್ ಪೂರೈಕೆ ಟೆಂಡರ್​ ಡೀಲ್​ನಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್​ನಲ್ಲಿ ಶೇ 40 ರಷ್ಟು ಸೇರಿದಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಕಮೀಷನ್ ಡೀಲ್ ಮಾಡಿಕೊಂಡಿದೆ ಎಂದು ಕಾಂಗ್ರೆಸ್​ ಆರೋಪ ಮಾಡಿತ್ತು.

ಇದನ್ನೂ ಓದಿ:ಇಂದು ಮಿಂಚಿದವರಿಗೆ ಜಾಕ್​ಪಾಟ್- ಅಭ್ಯಾಸ ಪಂದ್ಯದ ಪ್ಲಾನ್ ತಿಳಿಸಿದ ಕ್ಯಾಪ್ಟನ್ ಶರ್ಮಾ..!

ಇದನ್ನು ಪ್ರಶ್ನಿಸಿ ಬಿಜೆಪಿ ಪ್ರಧಾನಕಾರ್ಯದರ್ಶಿ ಕೇಶವಪ್ರಸಾದ್, ಖಾಸಗಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದರು. ಕೆಪಿಸಿಸಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿಯನ್ನು ಪ್ರತಿವಾದಿಯಾಗಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆಯಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು​ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.

ಇದನ್ನೂ ಓದಿ:Breaking: ಬೆಳ್ಳಂಬೆಳಗ್ಗೆ ಗುಡ್​ ನ್ಯೂಸ್.. LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು ಕೋರ್ಟ್​ ಕಟಕಟೆಯಲ್ಲಿ ಸಿಎಂ ಸಿದ್ದರಾಮಯ್ಯ.. ಡಿಕೆ ಶಿವಕುಮಾರ್; ಯಾವ ವಿಚಾರ..?

https://newsfirstlive.com/wp-content/uploads/2024/01/SIDDU-DKS-1.jpg

Load More