/newsfirstlive-kannada/media/post_attachments/wp-content/uploads/2024/03/Sonu-Gowda-7.jpg)
ಸ್ಯಾಂಡಲ್​ವುಡ್​ ನಟಿ ಸೋನು ಗೌಡ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 34ನೇ ವರ್ಷದ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ಇವರು ಮೇಕಪ್​ ಕಲಾವಿದ ರಾಮಕೃಷ್ಣ ಅವರ ಮಗಳು.
ಇಂತಿ ನಿನ್ನ ಪ್ರೀತಿಯ ಸಿನಿಮಾದ ಮೂಲಕ ಇಂಡಸ್ಟ್ರೀಗೆ ಕಾಲಿಟ್ಟ ನಟಿ ಪರಮೇಶ ಪಾನ್ವಾಲ, ಗುಲಾಮಾ ಹೀಗೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಸಹೋದರಿ ನೇಹಾ ಗೌಡ ಕೂಡ ಸೀರಿಯಲ್​ ನಟಿಯಾಗಿದ್ದು, ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
/newsfirstlive-kannada/media/post_attachments/wp-content/uploads/2024/03/Sonu-Gowda-1-3.jpg)
ಇದನ್ನೂ ಓದಿ: ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ ಕಿಚ್ಚಾ ಸುದೀಪ್​? ಅಭಿಮಾನಿಗಳ ತಲೆಯಲ್ಲಿ ಹುಳಬಿಟ್ಟ ರನ್ನ
2008ರಿಂದ ಸಿನಿಮಾಗಳಲ್ಲಿ ನಟಿಸುತ್ತಾ ಬಂದಿದ್ದಾರೆ. ಕಳೆದ ವರ್ಷ ಮರೀಚಿ, ಅಫೋರಿ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಇದಲ್ಲದೆ, ಜೊತೆ ಜೊತೆಯಲಿ ಸೀರಿಯಲ್​ನಲ್ಲೂ ರಾಜನಂದಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇಂದು ಸೋನು ಗೌಡ 34ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ.
ಇನ್ನು ಸೋನು ಗೌಡ ಕನ್ನಡ ಮಾತ್ರವಲ್ಲ, ತಮಿಳು, ಮಲಯಾಳಂ, ಸಿನಿಮಾಗಳಲ್ಲೂ ನಟಿಸಿದ್ದಾರೆ. ಇವರಿಗೆ ಕಿರಗೂರಿನ ಗಯ್ಯಾಳಿಗಳು ಸಿನಿಮಾಗೆ ಫಿಲ್ಮ್​ಫೇರ್​ ಪ್ರಶಸ್ತಿ ಕೂಡ ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us