/newsfirstlive-kannada/media/post_attachments/wp-content/uploads/2024/09/dk-shivakumr.jpg)
ಹಾಸನ: ಬಯಲುಸೀಮೆ ಜಿಲ್ಲೆಗಳ ಜನರ ದಶಕಗಳ ಕನಸು ಈಡೇರುವ ಸಮಯ ಬಂದಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ ಒಂದು ಇಂದು ಉದ್ಘಾಟನೆಯಾಗಲಿದೆ. ಸಕಲೇಶ್ವರದಿಂದ ಗ್ರ್ಯಾವಿಟಿ ಮೂಲಕ ನೀರು ಹರಿಸುವ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದೆ.
ಇದನ್ನೂ ಓದಿ: ಡಾ.ಬ್ರೋ ಕಂಪನಿಯಲ್ಲಿ ಉದ್ಯೋಗ ಅವಕಾಶ.. ಗೋಪ್ರವಾಸದಲ್ಲಿ ಗಗನ್ ಜೊತೆ ನೀವೂ ಸೇರಿಕೊಳ್ಳಿ!
ಕೊನೆಗೂ ಆ ಬಹುನಿರೀಕ್ಷಿತ ಸಮಯ ಬಂದೇ ಬಿಟ್ಟಿದೆ. ಗೌರಿ ಗಣೇಶ ಹಬ್ಬದ ಪ್ರಯಕ್ತ ಸರ್ಕಾರ ಪ್ರದೇಶಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆ ಮಾಡಲು ಮುಂದಾಗಿದೆ. ಹಾಸನದ ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ, ಹೊಂಗದಹಳ್ಳದಿಂದ 24.01 ಟಿಎಂಸಿ ನೀರನ್ನು ಹರಿಸುವ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ, 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿದೆ. ಜಾನುವಾರುಗಳಿಗೆ 14.056 ಟಿ.ಎಂ.ಸಿ ಹಾಗೂ 527 ಕೆರೆಗಳಿಗೆ 9.953 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50% ರಷ್ಟು ತುಂಬಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು. 2014ರಲ್ಲೇ ಯೋಜನೆಗೆ ಚಾಲನೆ ನೀಡಿದ್ರೂ ನಂತರ ಬಂದ ಸರ್ಕಾರಗಳು ಗಮನಹರಿಸಿಲ್ಲ. ಈಗ ಮತ್ತೆ ಕಾಂಗ್ರೆಸ್ ಸರ್ಕಾರ ಹಂತವೊಂದನ್ನು ಕಂಪ್ಲೀಟ್ ಮಾಡ್ತಾ, ಉದ್ಘಾಟನೆಗೆ ಮುಂದಾಗಿದೆ. ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ಸಚಿವರು ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ.
ಒಟ್ಟಾರೆ 2026ರ ಅಂತ್ಯಕ್ಕೆ ಗುರುತ್ವ ಕಾಲುವೆ 261.69 ಕಿ.ಮೀ ನಂತರದ ಎಲ್ಲಾ ಫೀಡರ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗುತ್ತೆ. ಸದರಿ ಯೋಜನೆಯನ್ನ 2027ರ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಎತ್ತಿನ ಹೊಳೆ ಯೋಜನೆಗೆ ಜೀವ ತುಂಬಿ, ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರನ್ನ ಒದಗಿಸಲು ಮುಂದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ