newsfirstkannada.com

ರಾಜ್ಯಕ್ಕೆ ಆಗಮಿಸ್ತಿರೋ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ.. ಡಾ.ಮಂಜುನಾಥ್ ಪರ ಪ್ರಚಾರದ ಪ್ಲಾನ್ ಏನು?

Share :

Published March 31, 2024 at 11:13am

Update March 31, 2024 at 11:31am

  ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಶಾ ಬ್ರೇಕ್‌ಫಾಸ್ಟ್ ಮೀಟಿಂಗ್

  ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ-ಜೆಡಿಎಸ್

  ಮೈತ್ರಿ ನಾಯಕರ ಜತೆ ಗ್ರೌಂಡ್ ರಿಪೋರ್ಟ್ ಬಗ್ಗೆ ಸಮಾಲೋಚನೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿಯು ಅಭ್ಯರ್ಥಿಗಳನ್ನ ಘೋಷಣೆ ಮಾಡಿವೆ. ಸದ್ಯ ಇದರ ಬೆನ್ನಲ್ಲೇ ಬಿಜೆಪಿಯ ಚುನಾವಣಾ ಚಾಣಕ್ಯ, ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ಅವರು ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾತ್ರಿ 11 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್ 2ರ ಬೆಳಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ 9:30ಕ್ಕೆ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಲಿದ್ದಾರೆ. ಮೈತ್ರಿ ನಾಯಕರ ಜೊತೆಗೆ ಪ್ರಸಕ್ತ ಗ್ರೌಂಡ್ ರಿಪೋರ್ಟ್ ಬಗ್ಗೆ ಶಾ ಸಮಾಲೋಚನೆ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಬೂತ್​ಮಟ್ಟದ ಪ್ರಮುಖರ ಜೊತೆ ಸಮಾವೇಶ ಕೈಗೊಳ್ಳಲಿದ್ದಾರೆ. ಇದಾದ ಬಳಿಕ ಮಧ್ಯಾಹ್ನ 3 ಗಂಟೆಗೆ ಖಾಸಗಿ ಹೋಟೆಲ್​ನಲ್ಲಿ ದಾವಣಗೆರೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು ಕ್ಷೇತ್ರಗಳ ಪಕ್ಷದ ಸದಸ್ಯರ ಜೊತೆ ಕೋರ್ ಕಮಿಟಿ ಸಭೆ ನಡೆಸುವರು.

ಇದನ್ನೂ ಓದಿ: ಕಾಂಗ್ರೆಸ್​ ಬ್ಯಾಂಕ್ ಅಕೌಂಟ್​ ಸ್ಥಗಿತ.. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ

ನಂತರ ಸಂಜೆ 6 ಗಂಟೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿಎನ್‌ ಮಂಜುನಾಥ್ ಪರ ಚನ್ನಪಟ್ಟಣದಲ್ಲಿ 1.5 ಕಿಲೋ ಮೀಟರ್ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ತಮ್ಮ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ. ಈ ರೋಡ್ ಶೋನಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಭಾಗವಹಿಸಲಿದ್ದಾರೆ. ಹಾಗೇ ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಲಿದ್ದು, ಏ.3 ರಂದು ಬೆಳಗ್ಗೆ 9.50ಕ್ಕೆ ಅಮಿತ್ ಶಾ ಅವರು ದೆಹಲಿಗೆ ವಾಪಸ್ ಆಗಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯಕ್ಕೆ ಆಗಮಿಸ್ತಿರೋ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ.. ಡಾ.ಮಂಜುನಾಥ್ ಪರ ಪ್ರಚಾರದ ಪ್ಲಾನ್ ಏನು?

https://newsfirstlive.com/wp-content/uploads/2024/02/AMIT-SHAH-3.jpg

Load More