Advertisment

BIG BREAKING: ನಾಳೆ ಸಿಎಂ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ನಿರ್ಧಾರ!

author-image
admin
Updated On
ರಾಜ್ಯಪಾಲರ ಕೈಯಲ್ಲಿ ಇಂದು ಸಿಎಂ ಸಿದ್ದರಾಮಯ್ಯರ ಭವಿಷ್ಯ; ಪ್ರಾಸಿಕ್ಯೂಷನ್ ಎಂದರೆ ಏನು..?
Advertisment
  • ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ನಿರ್ಧಾರ ಏನಾಗಲಿದೆ?
  • ನಾಳೆ ಮಧ್ಯಾಹ್ನ 12ಗಂಟೆಗೆ ಮುಡಾ ಕೇಸ್‌ನ ಮಹತ್ವದ ತೀರ್ಪು ಪ್ರಕಟ
  • ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ 40 ವರ್ಷದ ರಾಜಕೀಯದಲ್ಲಿ ಮುಡಾ ಹಗರಣದ ಆರೋಪ ಮುಳ್ಳಾಗಿದೆ. ತೀವ್ರ ಕುತೂಹಲ ಕೆರಳಿಸಿರುವ ಈ ಆರೋಪ ರಾಷ್ಟ್ರ ರಾಜಕೀಯದಲ್ಲೇ ಸಾಕಷ್ಟು ಸುದ್ದಿ ಮಾಡಿದೆ. ರಾಜಕೀಯ ಆರೋಪ, ಪ್ರತ್ಯಾರೋಪಗಳ ಮಧ್ಯೆ ಮುಡಾ ಹಗರಣದ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ.

Advertisment

ನಾಳೆ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರ ಆಗುವ ಸಾಧ್ಯತೆ ಇದೆ. ಹೈಕೋರ್ಟ್ ಏಕಸದಸ್ಯ ಪೀಠ ನಾಳೆ ಮಧ್ಯಾಹ್ನ 12ಗಂಟೆಗೆ ಮಹತ್ವದ ತೀರ್ಪು ಪ್ರಕಟ ಮಾಡುವ ಸಾಧ್ಯತೆ ಇದೆ. ನ್ಯಾ. ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ಮಹತ್ವದ ಆದೇಶ ಹೊರ ಬೀಳಲಿದ್ದು, ಇಡೀ ರಾಜ್ಯದ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.

ಸಿಎಂ ಸಿದ್ದರಾಮಯ್ಯ ಕುಟಂಬಸ್ಥರ ಮೇಲೆ ಪ್ರಭಾವ ಬಳಸಿ ಮೈಸೂರಿನ ಮುಡಾದಲ್ಲಿ ಅಕ್ರಮವಾಗಿ ಸೈಟು ಪಡೆದ ಗಂಭೀರ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಈ ಪ್ರಾಸಿಕ್ಯೂಷನ್‌ ಅನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಮುಡಾ ಕೇಸ್​ನಿಂದ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್; ಕೋರ್ಟ್​ನಲ್ಲಿ ನಡೆದ ವಾದ-ಪ್ರತಿವಾದ ಏನು? 

Advertisment

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮುಡಾ ಕೇಸ್‌ನ ಅರ್ಜಿಯ ವಿಚಾರಣೆ ನಡೆದಿತ್ತು. ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೋ ‌ರವಿ ವರ್ಮ ಕುಮಾರ್ ವಾದಿಸಿದ್ದರು. ಗವರ್ನರ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು. ಅರ್ಜುದಾರರ ಪರ ಮನ್ವಿಂದರ್ ಸಿಂಗ್, ಲಕ್ಷ್ಮಿ ಅಯ್ಯಾಂಗಾರ್, ಪ್ರಭುಲಿಂಗ ನಾವದಗಿ, ರಂಗನಾಥ್ ರೆಡ್ಡಿ, ರಾಘವನ್ ವಾದಿಸಿದ್ದರು. ಕಳೆದ ಸೆಪ್ಟೆಂಬರ್ 12 ರಂದು ಎರಡು ಕಡೆಯ ವಾದ ಆಲಿಸಿದ್ದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment