ಬಲಿಷ್ಠ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೋರಾಟ.. ಸೇಡು ತೀರಿಸಿಕೊಳ್ಳಲು ಚಿನ್ನದಂಥ ಅವಕಾಶ

author-image
Ganesh
Updated On
ಬಲಿಷ್ಠ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೋರಾಟ.. ಸೇಡು ತೀರಿಸಿಕೊಳ್ಳಲು ಚಿನ್ನದಂಥ ಅವಕಾಶ
Advertisment
  • ನಾಳೆ ಟಿ20 ವಿಶ್ವಕಪ್ ಸೆಮಿ ಫೈನಲ್ ಪಂದ್ಯಗಳು
  • ಇಂಗ್ಲೆಂಡ್ ಎದುರಿಸಲಿರುವ ರೋಹಿತ್ ಶರ್ಮಾ ಪಡೆ
  • ದಕ್ಷಿಣ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ ಸೆಣಸಾಟ

ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ನಾಳೆ ಗಯಾನಾದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​​ಗೆ ಪ್ರವೇಶಿಸಲಿದೆ.

ಹೀಗಾಗಿ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇದಕ್ಕೂ ಮುನ್ನ ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ 23 ಬಾರಿ ಮುಖಾಮುಖಿಯಾಗಿವೆ. ಇದೀಗ ಟೀಮ್ ಇಂಡಿಯಾ ಎರಡು ವರ್ಷಗಳ ಹಳೆಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕಲ್ಲಿದೆ.

ಇದನ್ನೂ ಓದಿ:ಸಂಸತ್ತಿಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದವರ ಮೇಲೆ ಫೈರಿಂಗ್.. ಐವರು ಸಾವು

ಮತ್ತೊಂದು ಕಡೆ ಅಫ್ಘಾನಿಸ್ತಾನ್ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ನಡೆಯಲಿದೆ. ಸೆಮಿಫೈನಲ್​ನಲ್ಲಿ ಗೆದ್ದ ತಂಡಗಳು ಫೈನಲ್ ಪ್ರವೇಶ ಮಾಡಲಿವೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದ್ದು, ಫೈನಲ್​​ನಲ್ಲಿ ಗೆದ್ದವರು ಟ್ರೋಫಿಗೆ ಮುತ್ತಿಡಲಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment