/newsfirstlive-kannada/media/post_attachments/wp-content/uploads/2025/06/MNG_RAINS_3.jpg)
ಚಿಕ್ಕಮಗಳೂರು: ಉಡುಪಿ, ಚಿಕ್ಕಮಗಳೂರು ಹಾಗೂ ಮಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಮೂರು ಜಿಲ್ಲೆಗಳಲ್ಲಿ ನಾಳೆನೂ (ಜೂ.16) ಗಾಳಿ ಸಮೇತ ಜೋರಾದ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರಜೆ ಘೋಷಣೆ ಮಾಡಲಾಗಿದೆ. ಇದರ ವಿವರ ಇಲ್ಲಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿ ಹಿನ್ನೆಲೆಯಲ್ಲಿ ನಾಳೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ 6 ತಾಲೂಕುಗಳಿಗೆ ಸೋಮವಾರ (ಜೂನ್ 16) ಮಾತ್ರ ರಜೆ ಇರಲಿದೆ. ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನ ಶಾಲೆಗಳಿಗೆ ರಜೆ ಇರುತ್ತದೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ.. ತುಂಬಿದ ನದಿಗಳು, ಗುಡ್ಡ ಕುಸಿಯುವ ಆತಂಕ
ಮಂಗಳೂರು: ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಣೆ ಮಾಡಿದ್ದಾರೆ. ಕರಾವಳಿಯಲ್ಲಿ ನಾಳೆ ಭಾರೀ ಮಳೆಯಾಗುವುದು ದಟ್ಟವಾಗಿದೆ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಬಹುದು ಎಂದು ಮೊದಲೇ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ ಹಾಗೂ ಮೂಡಬಿದಿರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಆಗಿದೆ.
ಉಡುಪಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಜನರು ಬೇಸರ ವ್ಯಕ್ತಪಡಿಸಿದ್ದಾರೆ. ನಾಳೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಇರುತ್ತದೆ. ಭಾರೀ ಗಾಳಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ಆದೇಶ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ